

ತುಮಕೂರು: ತುಮಕೂರು ನಗರದಲ್ಲಿ ಮೇ.10 ರಿಂದ 17ರ ವರೆಗೆ ವಿವಿಧ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಸುಸೂತ್ರವಾಗಿ ನಡೆಸಲು ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದಿಂದ 2024ನೇ ಸಾಲಿನ ಅಧಿವೇಶನದ ಇಲಾಖಾ ಪರೀಕ್ಷೆ ಹಾಗೂ ವಿವಿಧ ಆಗಮ ಪ್ರಗಮ ಪ್ರವರ, ಪ್ರವಿಣ ಪ್ರಸಿದ್ದ ಪರೀಕ್ಷೆಗಳು ನಿಗದಿತ ದಿನಾಂಕಗಳಂದು ನಡೆಯಲಿವೆ.
ನಗರದ ಅಶೋಕ ರಸ್ತೆ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮೇ 10 ರಿಂದ 12ರವರೆಗೆ ಇಲಾಖಾ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ದಿನಗಳಂದು ಬೆಳಗ್ಗೆ 9.30 ರಿಂದ ಸಂಜೆ 4.30ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ನಗರದ ಎಂಪ್ರೆಸ್ ಗರ್ಲ್ಸ್ ಹೈಸ್ಕೂಲ್ ಹಾಗೂ ಕುಣಿಗಲ್ ತಾಲ್ಲೂಕು ಎಡೆಯೂರಿನ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಸಂಸ್ಕತ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಮೇ.12 ರಿಂದ 17ರ ವರೆಗೆ ವಿವಿಧ ಆಗಮ ಪ್ರಗಮ ಪ್ರವರ, ಪ್ರವಿಣ ಪ್ರಸಿದ್ದ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಂದು ಬೆಳಗ್ಗೆ 9 ರಿಂದ ಸಂಜೆ 5ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.