ಆನ್‌ಲೈನ್ ಅರ್ಜಿ ಆಹ್ವಾನ

Application_new
Published on

ತುಮಕೂರು: ಜಿಲ್ಲಾ ವಿಕಲಚೇತನರು ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ವಿವಿಧ ಯೋಜನೆಗಳಡಿ ವಿಕಲಚೇತನ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಕಿಟ್ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಹ ವಿಕಲಚೇತನ ಫಲಾನುಭವಿಗಳು ಆನ್‌ಲೈನ್ ಮೂಲಕ ಗ್ರಾವi ಒನ್, ಕರ್ನಾಟಕ ಒನ್, ತುಮಕೂರು ಒನ್ ಕೇಂದ್ರಗಳ ಮೂಲಕ ಸೇವಾಸಿಂಧು ವೆಬ್‌ಸೈಟ್ ಪೋರ್ಟಲ್‌ನಲ್ಲಿ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಿ, ಮೂಲ ಪ್ರತಿಯನ್ನು ಜಿಲ್ಲಾ ಬಾಲಭವನ ಆವರಣದಲ್ಲಿರುವ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿಗೆ ಸಲ್ಲಿಸಬಹುದು.


ಮಾಹಿತಿಗೆ ದೂ.0816 2270029, 2005053 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net