ಮತದಾರರ ಪಟ್ಟಿ ಪರಿಷ್ಕರಣೆಗೆ ಆಂದೋಲನ

voterlist (1)
Published on

ತುಮಕೂರು:ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-ಗೆ ಸಂಬಂಧಿಸಿದಂತೆ ಮತದಾರರ ಅನುಕೂಲಕ್ಕಾಗಿ ನ.23 ಹಾಗೂ 24ರಂದು ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ

ವಿಶೇಷ ಆಂದೋಲನದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿ(ಬಿಎಲ್​ಒ)ಗಳು ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಹಾಜರಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ತೆಗೆದುಹಾಕುವಿಕೆಗೆ ಸಂಬಂಧಿಸಿದಂತೆ ಅರ್ಜಿ ಸ್ವೀಕರಿಸಲಿದ್ದಾರೆ.

ಸಾರ್ವಜನಿಕರು ತಮ್ಮ ನಿವಾಸ ವ್ಯಾಪ್ತಿಯ ಮತಗಟ್ಟೆಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹಾಗೂ ತಮ್ಮ ಮನೆಯ ಸದಸ್ಯರ ಹೆಸರುಗಳು ನಮೂದಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬಹುದು.

ಮತದಾರರ ಸೇರ್ಪಡೆಗೆ ನಮೂನೆ 6, ಅನಿವಾಸಿ ಭಾರತೀಯರ ಹೆಸರುಗಳ ಸೇರ್ಪಡೆಗೆ ನಮೂನೆ 6ಎ, ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ಉದ್ದೇಶಿತ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ, ಹೆಸರು ತೆಗೆದು ಹಾಕಲು ನಮೂನೆ 7 ಮತ್ತು ಮತದಾರರ ನಿವಾಸ ಬದಲಾವಣೆ, ಪ್ರಸ್ತುತ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ, ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಎಪಿಕ್​ ನೀಡುವಿಕೆ, ಅಂಗವಿಕಲ ವ್ಯಕ್ತಿ ಎಂದು ಗುರುತಿಸಲು ಮನವಿಗಾಗಿ ನಮೂನೆ 8ರಲ್ಲಿ ಅರ್ಜಿ ಸಲ್ಲಿಸಬಹುದು.

ಸಾರ್ವಜನಿಕರ ಮಾಹಿತಿಗಾಗಿ ಈಗಾಗಲೇ ಅ.29ರಂದು ಕರಡು ಮತದಾರರ ಪಟ್ಟಿ ಪ್ರಚುರಪಡಿಸಲಾಗಿದ್ದು, ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ನ.28ರ ವರೆಗೆ ಕಾಲಾವಕಾಶವಿದೆ.

************

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net