ರಾಷ್ಟ್ರೀಯ ಮತದಾರರ ದಿನಾಚರಣೆ

LS polls koppal voting gavishree youth voters cast them vote
Published on

ತುಮಕೂರು: ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಸ್ವೀಪ್​ ಸಮಿತಿ ವತಿಯಿಂದ ಜನವರಿ 25ರಂದು ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಏರ್ಪಡಿಸಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಜಯಂತ ಕುಮಾರ್​ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಶುಭಕಲ್ಯಾಣ್​ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಸಿವಿಲ್​ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೆ.ವಿ.ಅಶೋಕ್​, ಜಿಪಂ ಸಿಇಒ ಜಿ.ಪ್ರಭು, ಮಹಾನಗರಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಮತ್ತಿತರ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧನೆ, ಎಪಿಕ್​ ಕಾರ್ಡ್​ ವಿತರಣೆ, ಅತ್ಯುತ್ತಮ ಬಿಎಲ್​ಓಗಳಿಗೆ ಪ್ರಶಸ್ತಿ ಪತ್ರ ವಿತರಣೆ ಮಾಡಲಾಗುವುದು.

ದಿನಾಚರಣೆ ಪ್ರಯುಕ್ತ ನಗರದ ಬಿ.ಜಿ.ಎಸ್​ ವೃತ್ತದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವ ಮತದಾರರಿಂದ ಬೃಹತ್​ ಮಾನವ ಸರಪಳಿ ನಿರ್ಮಿಸಲಾಗುವುದು. ನಂತರ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net