ಕೌಶಲ ಸಂಪಾದನೆ ನಿರಂತರ ಪ್ರಕ್ರಿಯೆಯಾಗಲಿ: ಪ್ರೊ.ಎಂ.ವೆಂಕಟೇಶ್ವರಲು

10
Published on

ತುಮಕೂರು: ಕೌಶಲ್ಯವರ್ಧನೆ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು, ಅದು ನಿರಂತರ ಪ್ರಕ್ರಿಯೆಯಾಗಬೇಕು. ಆಗ ಮಾತ್ರ ಮಾಡುವ ಕೆಲಸದಲ್ಲಿ ವೇಗ ಮತ್ತು ನಿಖರತೆ ಸಾಧಿಸಿ ಕಾರ್ಯದಕ್ಷತೆ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದರು.

ತುಮಕೂರು ವಿವಿಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಂಡಳಿ (ಪಿಎಂಇಬಿ) ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ) ವತಿಯಿಂದ ಆಯೋಜಿಸಿದ್ದ ವಿವಿ ಬೋಧಕೇತರ ಸಿಬ್ಬಂದಿಗಳಿಗೆ ಡಿಜಿಟಲ್ ಸಾಕ್ಷರತೆ ಮತ್ತು ಸಂವಹನಾತ್ಮಕ ಆಂಗ್ಲಭಾಷಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

21ನೇ ಶತಮಾನದ ತಾಂತ್ರಿಕ ಯುಗದಲ್ಲಿ ಉತ್ತಮ ಸೇವೆಯನ್ನು ನೀಡಬೇಕಾದಲ್ಲಿ ಡಿಜಿಟಲ್ ಸಾಕ್ಷರತೆ ಮತ್ತು ಆಂಗ್ಲಭಾಷಾ ಸಂವಹನ ಕೌಶಲ್ಯಗಳು ಅತ್ಯಗತ್ಯ. ಕಾರ್ಯಾಗಾರದ ಸಂಪೂರ್ಣ ಪ್ರಯೋಜನವನ್ನು ಬೋಧಕೇತರ ಸಿಬ್ಬಂದಿಗಳು ಪಡೆದುಕೊಂಡು ಡಿಜಿಟಲ್ ಸಾಕ್ಷರತೆಯ ಅಗತ್ಯ, ಕೌಶಲ್ಯವನ್ನು ಹೆಚ್ಚಿಸಿಕೊಳ್ಳಿ ಎಂದರು.

ತುಮಕೂರು ವಿವಿ ಐಕ್ಯೂಎಸಿ ನಿರ್ದೇಶಕ ಪ್ರೊ.ಬಿ.ರಮೇಶ್ ಮಾತನಾಡಿದರು.
ಪಿಎಂಇಬಿ ನಿರ್ದೇಶಕ ಪ್ರೊ.ಬಿ.ಟಿ.ಸಂಪತ್ ಕುಮಾರ್, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಎ.ರೂಪೇಶ್‌ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net