

ತುಮಕೂರು: ಸರ್ಕಾರದ ಸೂಕ್ತ ಅನುದಾನವಿಲ್ಲದೆ ನೆನೆಗುದಿಗೆ ಬಿದ್ದಿರುವ ಬಿದರೆಕಟ್ಟೆ ತುಮಕೂರು ವಿವಿ ನೂತನ ಕ್ಯಾಂಪಸ್ `ಜ್ಞಾನಸಿರಿ'ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ ಭೇಟಿ ನೀಡಿ ಪರಿಶೀಲಿಸಿದರು.
ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವೆ ನಹಿದಾ ಜಮ್‌ಜಮ್ ಕಾಮಗಾರಿಗಳ ಬಗ್ಗೆ ಸಚಿವರಿಗೆ ವಿವರಿಸಿ, ಸರ್ಕಾರದಿಂದ ವಿಶೇಷ ಅನುದಾನಕ್ಕೆ ಮನವಿ ಮಾಡಿದರು.