

ತುಮಕೂರು: ಜಿಲ್ಲೆಯಲ್ಲಿ ಮೇ.20ರವರೆಗೆ ಗುಡುಗು-, ಸಿಡಿಲು ಸಹಿತ ಭಾರಿ ಪ್ರಮಾಣದ ಗಾಳಿ-, ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅರ್ಲಟ್ ಘೋಷಿಸಲಾಗಿದೆ. ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿಯೂ ಆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಶುಭಕಲ್ಯಾಣ್ ಸೂಚಿಸಿದ್ದಾರೆ.
ಪೂರ್ವ ಮುಂಗಾರು ಹಂಗಾಮಿನಲ್ಲಿ ಈವರೆಗೂ ಶೇ.134ರಷ್ಟು ಅಧಿಕ ಮಳೆಯಾಗಿದ್ದು, ಪ್ರವಾಹ, ಭಾರಿ ಮಳೆಯಿಂದ ಯಾವುದೇ ಜನ-ಜಾನುವಾರುಗಳ ಜೀವ ಹಾನಿಯಾಗದಂತೆ ಮುಂಜಾಗ್ರತೆ ವಹಿಸಬೇಕಿದೆ.
ಜಿಲ್ಲೆಯಲ್ಲಿ ಸಿಡಿಲು ಸಹಿತ ಮಳೆಯಾಗುವುದರಿಂದ ಸಿಡಿಲು ಬಡಿಯುವ ಪ್ರದೇಶದ ಬಗ್ಗೆ ರಾಜ್ಯದಿಂದ ಮುಂಚಿತವಾಗಿ ಸಾರ್ವಜನಿಕರಿಗೆ ಎಸ್ಎಂಎಸ್ ಅರ್ಲಟ್ ರವಾನಿಸಲಾಗುತ್ತಿದೆ. ಸಾರ್ವಜನಿಕರು ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚು ಎಚ್ಚರದಿಂದಿರಬೇಕು ಎಂದು ಸೂಚಿಸಲಾಗಿದೆ.
ಕೆರೆ-ಕಟ್ಟೆಗಳ ಏರಿ, ಬಂಡ್,ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ, ನಿಂತಿದ್ದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್, ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ, ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟ ಇತರೆ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ 7304975519, 0816- 2213400, 155304; ಬೆಸ್ಕಾಂ: 1912, 8277884019 ಸಂಪರ್ಕಿಸಿ.