

ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡೆಯಲ್ಲಿನ ಶೇಷ್ಠತೆಯನ್ನು ಗುರುತಿಸಲು ಮತ್ತು ಪುರಸ್ಕರಿಸಲು ಪ್ರತಿ ವರ್ಷ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಸದರಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.
ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನಚಂದ್ ಜೀವಮಾನ ಪ್ರಶಸ್ತಿ, ರಾಷ್ಟ್ರೀಯ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಜೀವಮಾನ ಪ್ರಶಸ್ತಿ, ರಾಷ್ಟ್ರೀಯ ಖೇಲ್ ಪ್ರೋತ್ಸಾಹ ಪುರಸ್ಕಾರ್ ಮತ್ತು ಮೌಲಾನಾ ಅಬ್ದುಲ್ ಕಲಾಂ ಆಜಾದ್ ಟ್ರೋಫಿಯನ್ನು ಕ್ರೀಡಾ ಅಭಿವೃದ್ಧಿ ಕ್ಷೇತ್ರದಲ್ಲಿ ಕ್ರೀಡಾಪಟುಗಳು, ತರಬೇತುದಾರರು, ಘಟಕಗಳು ಮತ್ತು ವಿಶ್ವವಿದ್ಯಾಲಯಗಳಿಗೆ ನೀಡಲಾಗುತ್ತದೆ.
ನ.10 ಅರ್ಜಿ ಸಲ್ಲಿಸಲು ಕೊನೆಯ ದಿನ. ಮಾಹಿತಿಗೆ 011-23387432ನ್ನು ಹಾಗೂ ಆನ್‌ಲೈನ್ ಫಾರ್ಮ್ಗಳನ್ನು ಸಲ್ಲಿಸಲು ಸಹಾಯಕ್ಕಾಗಿ ಟೋಲ್ ಫ್ರೀ ಸಹಾಯವಾಣಿ 1800-202-5155 ಮತ್ತು 1800-258-5155 ಸಂಪರ್ಕಿಸಿ.