

ತುಮಕೂರು: ರಾಜ್ಯದ ಯುವನಿಧಿ ಯೋಜನೆಯಡಿ ನೋಂದಾಯಿಸಿರುವ ಅಭ್ಯರ್ಥಿಗಳು ಪ್ರತಿ ತಿಂಗಳು 25ರೊಳಗೆ ತಾನು ನಿರುದ್ಯೋಗಿ ಎಂದು, ವ್ಯಾಸಂಗ ಮುಂದುವರೆಸುತ್ತಿಲ್ಲ ಎಂದು ಹಾಗೂ ಸ್ವಯಂ ಉದ್ಯೋಗಿ ಅಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿದೆ.
ಸೇವಾ ಸಿಂಧು ಪೋರ್ಟಲ್ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ದೂ.0816- 2278488 ಸಂಪರ್ಕಿಸಿ.