ಪರಮೇಶ್ವರ್ ನನನ್ನು ಅವರ ಮನೆಗೆ ಊಟಕ್ಕೆ ಕರೆದಿದ್ದರು; ಜಮೀರ್ ಅಹ್ಮದ್

Zameer-Ahmad-Khan
Published on

ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ನನ್ನನ್ನು ಕೂಡ ಅವರ ಮನೆಗೆ ಊಟಕ್ಕೆ ಕರೆದಿದ್ದರು. ಅಂದು ನಾನು ಹೋಗಲು ಸಾಧ್ಯವಾಗಲಿಲ್ಲ. ಇದರಲ್ಲಿ ವಿಶೇಷತೆ ಏನೂ ಇಲ್ಲ, ಬೇರೆ ಅರ್ಥ ಕಲ್ಪಿಸುವ ಅಗತ್ಯವೂ ಇಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದರು.

ದಾವಣಗೆರೆಗೆ ತೆರಳುವ ಮಾರ್ಗಮಧ್ಯೆ ತುಮಕೂರಿನ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲವರನ್ನು ಮಾತ್ರ ಊಟಕ್ಕೆ ಕರೆದಿದ್ದರು ಎಂಬುದು ಸುಳ್ಳು, ಮನೆಗೆ ಊಟಕ್ಕೆ ಕರೆಯುವುದು ತಪ್ಪಾ? ಎಂದು ಪ್ರತಿಕ್ರಿಯಿಸಿದರು.

ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ 5 ಗ್ಯಾರಂಟಿಗಳನ್ನು ನೀಡಿದ್ದು, ಅವುಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ನುಡಿದಂತೆ ನಾವು ನಡೆದಿz್ದೆÃವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net