ಅಪಘಾತದಲ್ಲಿ ಮೂವರ ಸಾವು

ತುಮಕೂರು ಸಮೀಪ‌ ಬೀಕರ ಅಪಘಾತ
ತುಮಕೂರು ಸಮೀಪ‌ ಬೀಕರ ಅಪಘಾತ
Published on

ಪ್ರಮುಖ ಮುಖ್ಯಾಂಶಗಳು

  • ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ
  • ಉತ್ತರ ಪ್ರದೇಶ ಮೂಲದ ಮೂವರ ದುರ್ಮರಣ
  • ಕೋರಾ ಠಾಣೆಯಲ್ಲಿ ಪ್ರಕರಣ ದಾಖಲು
ತುಮಕೂರು: ಕಾರು,‌ಲಾರಿ ನಡುವೆ ಭೀಕರ ಅಪಘಾತವಾಗಿದ್ದು ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ತಾಲೂಕು ನೆಲಹಾಳ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ರಜೆ ಹಿನ್ನೆಲೆ ಪ್ರವಾಸಕ್ಕೆ ತೆರಳುತ್ತಿದ್ದ ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಗಳಾದ
ಉತ್ತರ ಪ್ರದೇಶ ಮೂಲದ ಅನಿಕೇತ್ (42) ಅಭೀರ್ (44) ಹಾಗೂ ಆಂಧ್ರ ಮೂಲದ ಸನ್ಮೋಕ್ತಿ (35) ಮೃತರು.
ಮೃತರೆಲ್ಲರು ಬೆಂಗಳೂರಿನಲ್ಲಿ ವಾಸವಾಗಿದ್ದರು ಎನ್ನಲಾಗಿದ್ದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಸಾಲು ಸಾಲು ರಜೆ ಹಿನ್ನೆಲೆಯಲ್ಲಿ
ಸ್ನೇಹಿತರೆಲ್ಲ ಒಟ್ಟಿಗೆ ಪ್ರವಾಸಕ್ಕೆ ತೆರಳಿ
ಪ್ರವಾಸ ಮುಗಿಸಿ ವಾಪಸ್ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net