25ರಂದು ಬಸವ ಜಯಂತಿ

Basava Jayanti on the 25th
Basava Jayanti on the 25th
Published on
ಗುಬ್ಬಿ: ತಾಲೂಕು ವೀರಶೈವ ಲಿಂಗಾಯಿತ ಮಹಾಸಭಾ ಹಾಗೂ ಬಸವಾದಿಶಿವ ಶರಣರಿಂದ ಮೇ 25ರಂದು ಗುಬ್ಬಿ ಪಟ್ಟಣದ ಶ್ರೀ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಬಸವ ಜಯಂತಿ ಹಾಗೂ ಇಷ್ಟಲಿಂಗ ಪೂಜೆ ಏರ್ಪಡಿಸಲಾಗಿದೆ ಎಂದು ತಾಲೂಕು ವೀರಶೈವ ಲಿಂಗಾಯತ ಸಮುದಾಯದ ಅಧ್ಯಕ್ಷ ಮಂಜುನಾಥ್​ ತಿಳಿಸಿದರು.
ತಾಲೂಕಿನಲ್ಲಿ ಬಸವ ಜಯಂತಿ ಕುರಿತು ಸೋಮವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪಟ್ಟಣದ ಶ್ರೀ ಚನ್ನಬಸವೇಶ್ವರ ದೇವಾಲಯ ಆವರಣದಿಂದ ಹೇರೂರು ಶ್ರೀ ಸಿದ್ಧರಾಮೇಶ್ವರ ಸಮುದಾಯ ಭವನದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಮೆರವಣಿಗೆಯಲ್ಲಿ ಹಲವು ಸಾಂಸತಿಕ ಕಲಾತಂಡಗಳೊಂದಿಗೆ ಹಾಗೂ ಶ್ರೀಗಳ ನೇತೃತ್ವದಲ್ಲಿ ಶ್ರೀ ಸಿದ್ಧರಾಮೇಶ್ವರ ಸಮುದಾಯ ಭವನಕ್ಕೆ ಆಗಮಿಸಿ ನಂತರ ಧಾರ್ಮಿಕ ಕಾರ್ಯಕ್ರಮ, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದ ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಮುಖಂಡರಾದ ಬಸವಲಿಂಗಪ್ಪ ರೇಣುಕಪ್ಪ ಜಗದೀಶ್​, ಪಾಲನೆತ್ರಯ್ಯ, ಸಿದ್ದಲಿಂಗ ಮೂರ್ತಿ, ಮಂಜುನಾಥ ಅಮ್ಮನಘಟ್ಟ ಮಂಜುನಾಥ್​, ರಮೇಶ್​, ಯತೀಶ್​ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net