ಪಟ್ಟಣದ ತೀನಂಶ್ರೀ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ಅದೇಶದಂತೆ ಏ.1ರಿಂದ 15ವರೆಗೆ ಸಾರ್ವಜನಿಕರು ಸ್ವಯಂ ಗಣತಿಯನ್ನು ಮಾಡಿಕೊಳ್ಳುವ ಮೂಲಕ ಮಾಹಿತಿ ನೀಡಬೇಕಿದೆ. ಸಾರ್ವಜನಿಕರು ತಮ್ಮ ಮೊಬೈಲ್ನಿಂದ ತಾವೇ ಗಣತಿಯನ್ನು ಮಾಡಿಕೊಳ್ಳಬಹುದಾಗಿದ್ದು, ಇದಕ್ಕೆ ನಾಗರಿಕರ ಸಹಕಾರ ಮುಖ್ಯವಾಗಿದೆ. ಸರ್ಕಾರದ ಸೌಲಭ್ಯಗಳು ಪ್ರತಿಯೊಬ್ಬರಿಗೂ ತಲುಪಬೇಕಾದರೆ ನಿಖರವಾದ ಅಂಕಿ-&ಅಂಶಗಳ ಅತ್ಯವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಸ್ವಯಂಜನಗಣತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.