ತಾಲೂಕಿನಲ್ಲಿ ಬಿಜೆಪಿ ಕಟ್ಟಿ ಬೆಳಸಿದ್ದ ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್ 2023ರಲ್ಲಿ ಕಾಂಗ್ರೆಸ್ ಪಾಳಯಕ್ಕೆ ಜಿಗಿದಿದ್ದಾರೆ, ಬಿಜೆಪಿಯಲ್ಲಿ ಗೆದ್ದು ಮಂತ್ರಿಯೂ ಆಗಿದ್ದ ಜೆ.ಸಿ.ಮಾಧುಸ್ವಾಮಿ ಕೂಡ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಕಾರಣದಿಂದ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮಂಡಲ ಅಧ್ಯಕ್ಷರಾಗಲು ಕಾರ್ಯಕರ್ತರು ಸಿಗದೆ ಬಿಜೆಪಿಗೆ ಪರದಾಡುವಂತಾಗಿತ್ತು.