ಏ.3 ರಂದು ಮಧುಗಿರಿಗೆ ಸಿಎಂ

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published on

ಪ್ರಮುಖ ಮುಖ್ಯಾಂಶಗಳು

  • ಜಿಪಂ ಸಿಇಒ ಅಶ್ವಿಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
  • ಮಾ.20ರೊಳಗೆ ಸಿದ್ಧತೆ ಪೂರ್ಣಗೊಳಿಸಿ
  • ಶಿಷ್ಟಾಚಾರ ಪಾಲನೆಗೆ ಒತ್ತು
ತುಮಕೂರು: ಜಿಲ್ಲೆಯ ಮಧುಗಿರಿಗೆ ಸಿಎಂ ಸಿದ್ದರಾಮಯ್ಯ ಏ.3ರಂದು ಭೇಟಿ ನೀಡಲಿದ್ದು ವಿವಿಧ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿರುವರು. ಈ ಹಿನ್ನೆಲೆಯಲ್ಲಿ ಕಾಮಗಾರಿಗಳು, ಹೊಸ ಯೋಜನೆಗಳ ಪಟ್ಟಿಯನ್ನು ಮಾ.20ರೊಳಗೆ ಅಂತಿಮಗೊಳಿಸುವಂತೆ ಜಿಪಂ ಸಿಇಒ ಬಿ.ವಿ.ಅಶ್ವಿಜ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರ ಜಿಪಂ ವಿಡಿಯೋ ಕಾನ್ಫರೆನ್ಸ್​ ಸಭಾಂಗಣದಲ್ಲಿ ಬುಧವಾರ ವಿವಿಧ ಹಂತದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಈಗಾಗಲೇ ಕಾರ್ಯಕ್ರಮದ ವೇದಿಕೆಯ ಜಾಗ, ಇನ್ನಿತರೆ ಪೂರ್ವ ಸಿದ್ಧತೆಗಳ ರೂಪು-ರೇಷೆಗಳನ್ನು ಅಂತಿಮಗೊಳಿಸಲಾಗಿದೆ. ಅದರಂತೆ ಮುಖ್ಯಮಂತ್ರಿಯವರು ಉದ್ಘಾಟಿಸಲಿರುವ ಹಾಗೂ ಶಂಕುಸ್ಥಾಪನೆ ನೆರವೇರಿಸಲಿರುವ ಫಲಕಗಳನ್ನು ಎಲ್ಲಿಯೂ ಶಿಷ್ಟಾಚಾರ ಉಲ್ಲಂನೆಯಾಗದಂತೆ ಸಿದ್ಧಪಡಿಸಿ ಸಂಬಂಧಿಸಿದ ಫಲಕದ ಪ್ರತಿಯನ್ನು 20ರೊಳಗೆ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವಂತೆ ತಿಳಿಸಿದರು.
ಮಧುಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 39 ಗ್ರಾಮ ಪಂಚಾಯತಿಗಳಿಂದ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಲು ವಾಹನ ವ್ಯವಸ್ಥೆ ಇತ್ಯಾದಿ ಸಿದ್ಧತೆಗಳನ್ನು ನಿಯೋಜಿತ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಿ ಮಾಹಿತಿಯನ್ನು ಒದಗಿಸಬೇಕು. ಅಲ್ಲದೆ, ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳಿಗೆ ಹಾಗೂ ಸಾರ್ವಜನಿಕರಿಗೆ ಊಟದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಇತ್ಯಾದಿಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಶ್ವಿಜ ಸಲಹೆ ನೀಡಿದರು.
ಹೆಲಿಪ್ಯಾಡ್​ : ಏ.3ರಂದು ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್​ ಮೂಲಕ ಆಗಮಿಸಲಿದ್ದು, ಸೂಕ್ತ ಹೆಲಿಪ್ಯಾಡ್​ ವ್ಯವಸ್ಥೆಯನ್ನು ಹಾಗೂ ವೇದಿಕೆ ನಿಮಾರ್ಣ ಇತ್ಯಾದಿ ಜವಾಬ್ದಾರಿಗಳನ್ನು ವಹಿಸಿಕೊಂಡಿರುವ ಲೋಕೋಪಯೋಗಿ ಇಲಾಖೆ ಸಂಬಂಧಿಸಿದ ಕಾಮಗಾರಿಗಳಿಗೆ ದೃಢೀಕರಣ ನೀಡಬೇಕು ಎಂದು ಅಶ್ವಿಜ ಹೇಳಿದರು.
ಅಲ್ಲದೆ, ವಿವಿಧ ಪ್ರಮುಖ ಇಲಾಖೆಗಳಲ್ಲಿ ಆಗಿರುವ ಪ್ರಮುಖ ಅಭಿವೃದ್ಧಿ ಯೋಜನೆಗಳ ಮಾಹಿತಿಯನ್ನು ಮುಖ್ಯಮಂತ್ರಿಯವರ ಭಾಷಣದ ಕರಡು ತಯಾರಿಸಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಯವರಿಗೆ ಇದೇ 23ರೊಳಗೆ ಒದಗಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿಗಳಾದ ಸಂಜೀವಪ್ಪ, ಈಶ್ವರಪ್ಪ, ಯೋಜನಾಧಿಕಾರಿ ಸಣ್ಣಮಸಿಯಪ್ಪ ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಅಲ್ಲದೆ, ಮಧುಗಿರಿ ಕ್ಷೇತ್ರ ವ್ಯಾಪ್ತಿಯ ಇಲಾಖೆಗಳ ಅಧಿಕಾರಿಗಳು ವಿಡಿಯೋ ಸಂವಾದದ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net