ದೆಹಲಿ ಆಸ್ಪತ್ರೆಯಲ್ಲಿ ಶಾಸಕ ಕೆ.ಷಡಕ್ಷರಿ ಆರೋಗ್ಯ ವಿಚಾರಿಸಿದ ಡಿಸಿಎಂ

ಷಡಕ್ಷರಿ ಆರೋಗ್ಯ ವಿಚಾರಿಸಿದ ಡಿಸಿಎಂ ಡಾ.ಜಿ.ಪರಮೇಶ್ವರ
ಷಡಕ್ಷರಿ ಆರೋಗ್ಯ ವಿಚಾರಿಸಿದ ಡಿಸಿಎಂ ಡಾ.ಜಿ.ಪರಮೇಶ್ವರ
Published on

ಪ್ರಮುಖ ಮುಖ್ಯಾಂಶಗಳು

  • ದೆಹಲಿ ಕರ್ನಾಟಕ ಭವನದಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ಕೈ ಶಾಸಕ
  • ತಿಪಟೂರು ಕ್ಷೇತ್ರದಿಂದ ಗೆದ್ದಿರುವ ಷಡಕ್ಷರಿ ಮಂತ್ರಿ ಸ್ಥಾನಕ್ಕೆ ಲಾಬಿ
  • ದೆಹಲಿ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ
ತುಮಕೂರು: ನವದೆಹಲಿ ಪ್ರವಾಸದ ಸಂದರ್ಭದಲ್ಲಿ ಕರ್ನಾಟಕ ಭವನದಲ್ಲಿ ಗುರುವಾರ ಬೆಳಗ್ಗೆ ಅಸ್ವಸ್ಥಗೊಂಡಿದ್ದ ತಿಪಟೂರು ಶಾಸಕ ಕೆ.ಷಡಕ್ಷರಿ ಚೇತರಿಸಿಕೊಳ್ಳುತ್ತಿದ್ದಾರೆ.
ಅಸ್ವಸ್ಥಗೊಂಡ ಷಡಕ್ಷರಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಮಧ್ಯಾಹ್ನ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು.
ಈ ವೇಳೆ ವೈದ್ಯರಿಂದ ಷಡಕ್ಷರಿ ಅವರ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದು, ಅಗತ್ಯವಿರುವ ಎಲ್ಲ ರೀತಿಯ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ ಪರಮೇಶ್ವರ, ಶಾಸಕ ಷಡಕ್ಷರಿ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಕೂಡ ಜತೆಗಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net