ಔಷಧಕ್ಕಾಗಿ ರೋಗಿಗಳನ್ನು ಅಲೆಸದಿರಿ

ಆಸ್ಪತ್ರೆ ವೈದ್ಯರಿಗೆ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಸೂಚನೆ
ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಾಪಂ ಇಒ ಮಧುಸೂದನ್​, ಆರೋಗ್ಯಾಧಿಕಾರಿ ಡಾ.ನಾಗೇಶ್​, ಗ್ರಾಮಾಂತರ ವೃತ್ತ ನಿರೀಕ್ಷಕ ಕೊಟ್ರೇಶಿ, ಪುರಸಭೆ ಹಿರಿಯ ಆರೋಗ್ಯಾಧಿಕಾರಿ ಶಂಶುದ್ದೀನ್​, ಬೆಸ್ಕಾಂ ಅಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿ ಇದ್ದರು.
ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಾಪಂ ಇಒ ಮಧುಸೂದನ್​, ಆರೋಗ್ಯಾಧಿಕಾರಿ ಡಾ.ನಾಗೇಶ್​, ಗ್ರಾಮಾಂತರ ವೃತ್ತ ನಿರೀಕ್ಷಕ ಕೊಟ್ರೇಶಿ, ಪುರಸಭೆ ಹಿರಿಯ ಆರೋಗ್ಯಾಧಿಕಾರಿ ಶಂಶುದ್ದೀನ್​, ಬೆಸ್ಕಾಂ ಅಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿ ಇದ್ದರು.
Published on: 

ಪಾವಗಡ: ಆಸ್ಪತ್ರೆಗೆ ಆಗಮಿಸುವ ಬಡ ರೋಗಿಗಳಿಗೆ ತಪಾಸಣೆ ಮತ್ತು ಚಿಕಿತ್ಸೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನಿರಂತರ ಸೇವೆ ನೀಡಬೇಕು ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ್​ ಬಾಬುಗೆ ಆರೋಗ್ಯ ರಾ ಸಮಿತಿ ಅಧ್ಯಕ್ಷ, ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಸೂಚಿಸಿದರು.

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿ, ಆಸ್ಪತ್ರೆಯಲ್ಲಿ ಔಷಧ, ಎಕ್ಸ್​-ರೇ ಫಿಲ್ಮ್​, ಸ್ಕಾ$ನಿಂಗ್​ ಸೌಲಭ್ಯ ಕೊರತೆ ಇದೆ ಎಂದು ಸಾರ್ವಜನಿಕರಿಂದ ನಿರಂತರ ದೂರುಗಳು ಬರುತ್ತಿವೆ. ತಜ್ಞ ವೈದ್ಯರು ಬರೆದುಕೊಡುವ ಔಷಧಗಳನ್ನೇ ರೋಗಿಗಳಿಗೆ ನೀಡಬೇಕು. ಮೆಡಿಕಲ್​ ಶಾಪ್​ಗೆ ಅಲೆದಾಡುವ ಪರಿಸ್ಥಿತಿ ಬರಬಾರದು ಎಂದರು.

ಪಟ್ಟಣದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇದ್ದು, ಪ್ರತಿ ಮಹಡಿಗೂ ಕುಡಿಯುವ ನೀರು, ಶೌಚಗೃಹಗಳಲ್ಲಿ ನೀರಿನ ಸೌಲಭ್ಯ, ಸ್ವಚ್ಛತೆ ಕಡ್ಡಾಯವಾಗಿ ನಿರ್ವಹಿಸಬೇಕು. ಸೆಕ್ಯುರಿಟಿ ಸಿಬ್ಬಂದಿ 24 ಗಂಟೆ ಇರಬೇಕು ಎಂದು ಸೂಚಿಸಿದರು.

ತಾಲೂಕಿನಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳ ಸಂಖ್ಯೆ ಹೆಚ್ಚಿದ್ದು, ತಾಯಿ ಮತ್ತು ಮಕ್ಕಳ 60 ಹಾಸಿಗೆ ಆಸ್ಪತ್ರೆಯಲ್ಲಿ ದಾಖಲಾಗುವ ಮಕ್ಕಳಿಗೆ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ ತೆರೆದು ಆಹಾರ ನೀಡುವ ವ್ಯವಸ್ಥೆ ಮಾಡಬೇಕು ಎಂದರು.

ತಹಸೀಲ್ದಾರ್​ ವೈ.ರವಿ ಮಾತನಾಡಿ, ಜಿಲ್ಲಾ ಕೇಂದ್ರದಿಂದ ಸುಮಾರು 150 ಕಿ.ಮೀ ದೂರದಲ್ಲಿದ್ದು, ಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿದೆ. ಹೀಗಾಗಿ ಇಲ್ಲಿನ ರೋಗಿಗಳು ತುಮಕೂರು, ಬೆಂಗಳೂರಿಗೆ ಹೋಗಲು ಸಾಧ್ಯವಾಗದೆ ಇದೇ ಆಸ್ಪತ್ರೆ ನಂಬಿಕೊಂಡಿದ್ದಾರೆ. ಆದ್ದರಿಂದ ಹೆಚ್ಚಿನ ತಜ್ಞ ವೈದ್ಯರು, ಅರವಳಿಕೆ ತಜ್ಞರು, ಸ್ತ್ರೀರೋಗ ತಜ್ಞರ ಸೇವೆ ನಿರಂತರ ಸಿಗಬೇಕು ಎಂಬುದು ಸಾರ್ವಜನಿಕರ ಬೇಡಿಕೆಯಾಗಿದ್ದು, ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಸಾರ್ವಜನಿಕರು ದೂರುವ ಮೊದಲೇ ಪ್ರತಿ ಎರಡು-&ಮೂರು ತಿಂಗಳಿಗೊಮ್ಮೆ ಆರೋಗ್ಯ ರಕ್ಷಾ ಸಮಿತಿ ಸಭೆ ಕರೆದು, ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net