13 ರಂದು ಪ್ರಶಸ್ತಿ ಪ್ರದಾನ: ಮಾ.13ರಂದು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದು, ಸುವರ್ಣಮುಖಿ ಸಂಸತಿ ಧಾಮದ ಅಧ್ಯಕ್ಷ ಡಾ.ಆಚಾರ್ಯ ಎಂ.ನಾಗರಾಜ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಪ್ರಶಸ್ತಿ ಪ್ರದಾನ ಮಾಡುವರು. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಈಶ್ವರ್ ಅರ್.ಹೊಸಮನಿ, ರಾಷ್ಟ್ರೀಯ ಸ್ವಾಭಿಮಾನ ಪರಿಷತ್ತಿನ ಅಧ್ಯಕ್ಷ ಬಸವರಾಜ ಪಾಟೀಲ್ ಉಪಸ್ಥಿತರಿರುವರು.