ಮುಖ್ಯಶಿಕ್ಷಕ ಲೋಕೇಶ್ ಮಾತನಾಡಿ, ಮಕ್ಕಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯ ಬೆಳೆಸಿಕೊಂಡು ಉತ್ತಮ ಸಾಧನೆ ಮಾಡಬೇಕು. ಎನ್.ಎಂ.ಎಂ.ಎಸ್ನಲ್ಲಿ ಕಳೆದ ವರ್ಷದಂತೆ ಈ ಬಾರಿಯೂ 9 ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರು. ಗ್ರಾಪಂ ಮಾಜಿ ಅಧ್ಯಕ್ಷ ಶಿವಕುಮಾರಸ್ವಾಮಿ , ಎಸ್ಡಿಎಂಸಿ ಅಧ್ಯಕ್ಷ ದಯಾನಂದ್ ಶಿಕ್ಷಕರು ಇದ್ದರು.