ಹುಳಿಯಾರು: ಸ್ಪರ್ಧಾತ್ಮಕ ಜಗತ್ತಿನಲ್ಲಿ ಉನ್ನತ ಶಿಕ್ಷಣದ ಪ್ರಾಮುಖ್ಯತೆ ಅಪಾರವಾಗಿದೆ. ವಿದ್ಯಾರ್ಥಿಗಳು ಪದವಿಗೆ ತಮ್ಮ ಶಿಕ್ಷಣ ನಿಲ್ಲಿಸದೆ ಉನ್ನತ ಅಧ್ಯಯನದ ಕಡೆಗೆ ಗಮನ ಹರಿಸಬೇಕು ಎಂದು ಐಕ್ಯೂಎಸ್ಸಿ ಸಂಚಾಲಕಿ ಕೆ.ಬಿ.ಸರಸ್ವತಿ ಹೇಳಿದರು.
ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ಅಂತಿಮ ವರ್ಷದ ವಿದ್ಯಾರ್ಥಿಗಳು ಕಾಲೇಜಿನ ಶಿಸ್ತು ಮತ್ತು ಗೌರವ ಹೆಚ್ಚಿಸಿದ್ದಾರೆ ಎಂದು ಪ್ರಾಂಶುಪಾಲ ಎಸ್.ಸಿ.ವೀರಣ್ಣ ಶ್ಲಾಘಿಸಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ರಮೇಶ್ ಮಾತನಾಡಿ, ವಿದ್ಯಾರ್ಥಿಗಳು ಉದ್ಯೋಗ ಮಾರುಕಟ್ಟೆಗೆ ಸಜ್ಜಾಗಲು ಬೇಕಾದ ಅಗತ್ಯ ಸಲಹೆ ಹಾಗೂ ಉನ್ನತ ವಿದ್ಯಾಭ್ಯಾಸವನ್ನು ಮುಂದುವರಿಸಲು ಸೂಕ್ತ ಮಾರ್ಗದರ್ಶನ ನೀಡಿದರು.
ಇತಿಹಾಸ ವಿಭಾಗದ ಮುಖ್ಯಸ್ಥ ಧನಂಜಯ್, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಲಾವಣ್ಯ, ಕರಿಬಸಪ್ಪ, ನಾಗವೇಣಿ, ಕಾವ್ಯಾ, ರಶ್ಮಿ, ಕೃಷ್ಣಮೂರ್ತಿ ಇದ್ದರು.