ಸಿದ್ಧಗಂಗಾ ಮಠಕ್ಕೆ ಮಾಜಿ ಸಿಎಂ ಬಿಎಸ್​ವೈ ಭೇಟಿ

ಸಿದ್ಧಗಂಗೆ ಡಾ.ಶಿವಕುಮಾರಸ್ವಾಮೀಜಿ ಗದ್ದುಗೆ ದರ್ಶನ ಪಡೆದ ಬಿಎಸ್​ವೈ
ಸಿದ್ಧಗಂಗೆ ಡಾ.ಶಿವಕುಮಾರಸ್ವಾಮೀಜಿ ಗದ್ದುಗೆ ದರ್ಶನ ಪಡೆದ ಬಿಎಸ್​ವೈ
Published on

ಪ್ರಮುಖ ಮುಖ್ಯಾಂಶಗಳು

  • ಡಾ.ಶಿವಕುಮಾರಸ್ವಾಮೀಜಿ 119ನೇ ಜಯಂತಿ
  • ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ
ತುಮಕೂರು: ಡಾ.ಶಿವಕುಮಾರ ಸ್ವಾಮೀಜಿಯವರ 119ನೇ ಜಯಂತಿ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮಂಗಳವಾರ ಸಿದ್ಧಗಂಗಾ ಶ್ರೀಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು. ನಂತರ ಮಠಾಧ್ಯಕ್ಷ ಶ್ರೀಸಿದ್ದಲಿಂಗ ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ಶ್ರೀಗಳೊಂದಿಗೆ ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬಿಎಸ್​ವೈ, ಶ್ರೀಗಳ 119ನೇ ಜನ್ಮ ಜಯಂತ್ಯೋತ್ಸವದ ಶುಭ ಸಂದರ್ಭದಲ್ಲಿ ಗದ್ದುಗೆ ದರ್ಶನ ಪಡೆಯುವಂತಹ ಸೌಭಾಗ್ಯ ನನಗೆ ಸಿಕ್ಕಿದೆ. ಪ್ರತಿನಿತ್ಯವೂ ನಾನು ಶ್ರೀಗಳನ್ನು ನೆನಪು ಮಾಡಿಕೊಳ್ಳದೆ, ಅವರು ಹೆಸರನ್ನು ಜಪಿಸದೆ ಯಾವ ಕೆಲಸವನ್ನೂ ಮಾಡುವುದಿಲ್ಲ. ಪೂಜ್ಯರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ ಎಂದರು.
ನಾಳೆ ಶ್ರೀಗಳ 119ನೇ ಜಯಂತಿ ಮತ್ತು ಗುರುವಂದನಾ ಮಹೋತ್ಸವ ನಡೆಯುತ್ತಿದ್ದು, ಈ ಅಭೂತ ಪೂರ್ವ ಕಾರ್ಯಕ್ರಮದಲ್ಲಿ ದೇಶದ ರಾಷ್ಟ್ರಪತಿ ದ್ರೌಪದಿ ಮುಮುರ್ ಅವರು ಭಾಗವಹಿಸುತ್ತಿರುವುದು ಸ್ವಾಗತಾರ್ಹ. ರಾಷ್ಟ್ರಪತಿಗಳು ಶ್ರೀಕ್ಷೇತ್ರಕ್ಕೆ ಆಗಮಿಸುತ್ತಿರುವುದು ತುಮಕೂರಿನ ಮೆರುಗು ಮತ್ತಷ್ಟು ಹೆಚ್ಚಿಸಿದೆ ಎಂದರು.
ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಗಳು ನೂರಕ್ಕೆ ನೂರರಷ್ಟು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಜ್ಯೋತಿಗಣೇಶ್​, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್​ ಹೆಬ್ಬಾಕ, ಮುಖಂಡರಾದ ಎಚ್​.ಎನ್​. ದೀಪಕ್​ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net