ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ; ಅಪಾಯದಿಂದ ಪಾರಾದ ಪ್ರಯಾಣಿಕರು
ರಾಷ್ಟ್ರೀಯ ಹೆದ್ದಾರಿ ಪಕ್ಕಕ್ಕೆ ಉರುಳಿ ಬಿದ್ದಿರುವ ಕೆಂಪು ಬಸ್
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಆಕ್ಸಲ್ ತಂಡಾಗಿ ರಸ್ತೆಯ ಪಕ್ಕಕ್ಕೆ ಉರುಳಿದ ಬಸ್
ಪ್ರಯಾಣಿಕರ ಸುರಕ್ಷತೆ ಮರೆತ ಕೆಎಸ್ಆರ್ಟಿಸಿ
ತುಮಕೂರು ಜಿಲ್ಲೆ ಗುಬ್ಬಿ ಸಮೀಪ ಘಟನೆ
ತುಮಕೂರು: ರಾಷ್ಟ್ರೀಯ ಹೆದ್ದಾರಿ 206ರ ಗುಬ್ಬಿ ತಾಲೂಕು ಎಂ.ಹೆಚ್.ಪಟ್ಟಣ ಗೇಟ್ ಬಳಿ ತಾಂತ್ರಿಕ ದೋಷದಿಂದ ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರದ ಬಸ್ ಪಲ್ಟಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ದೊಡ್ಡ ಅಪಾಯದಿಂದ ಪಾರದ ಘಟನೆ ಮಂಗಳವಾರ ನಡೆದಿದೆ.
ತಿಪಟೂರು ಡಿಪೋಗೆ ಸೇರಿದ ಬಸ್ ಹೊಸದುರ್ಗದಿಂದ ಬೆಂಗಳೂರಿಗೆ ತೆರಳುತ್ತಿತ್ತು ಪ್ರಯಾಣಿಸುತ್ತಿದ್ದ ಸರ್ಕಾರಿ ಬಸ್‌ನ ಅಕ್ಸೆಲ್ ಭಾಗದಲ್ಲಿ ತಾಂತ್ರಿಕ ದೋಷ ಉಂಟಾಗಿ, ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಪಲ್ಟಿಯಾಗಿದೆ. ತಕ್ಷಣವೇ ಸ್ಥಳೀಯರು ಸ್ಪಂದಿಸಿ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಗೆ ಮುಂದಾದರು.
ಮಾಹಿತಿ ತಿಳಿದ ಗುಬ್ಬಿ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಗಾಯಗೊಂಡ ಪ್ರಯಾಣಿಕರಿಗೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತದ ಪರಿಣಾಮವಾಗಿ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು,
ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.