ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು

It was the BJP that implemented the SIR.
It was the BJP that implemented the SIR.
Published on
ತಿಪಟೂರು:ಒಂದು ದೇಶದ ಪೌರತ್ವದ ಹೆಗ್ಗುರುತು ಎಂದರೆ ಆ ದೇಶದ ಮತದಾರರಾಗಿರುವುದು ಎಂದು ಪ್ರಾಂಶುಪಾಲ ಎಂ.ಡಿ.ಶಿವಕುಮಾರ್​ ತಿಳಿಸಿದರು.
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್​ನಿಂದ ಆಯೋಜಿಸಿದ್ದ ಪ್ರಜಾಪ್ರಭುತ್ವ ಉಳಿವಿಗೆ ಮತದಾನದ ಮಹತ್ವ ವಿಷಯ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಮತದಾನದ ಮೂಲಕ ತಮ್ಮ ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಿ, ಜವಾಬ್ದಾರಿಯುತ ಸರ್ಕಾರವನ್ನು ರಚಿಸುವಂತೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಕರ್ತವ್ಯ. ಇದಕ್ಕಾಗಿ ಮತಪಟ್ಟಿಯಲ್ಲಿ ಹೆಸರು ದಾಖಲಾಗಬೇಕಾಗಿರುವುದು ಅತ್ಯವಶ್ಯಕ. ಈ ನಿಟ್ಟಿನಲ್ಲಿ ಎಸ್​ಐಆರ್​ನಲ್ಲಿ ಯಾವುದೇ ಅರ್ಹ ಮತದಾರ ಬಿಟ್ಟು ಹೋಗದಂತೆ ಹಾಗೂ ಅನರ್ಹ ಮತದಾರ ಸೇರದಂತೆ ನೋಡಿಕೊಳ್ಳುವ ಹೊಣೆ ನಮ್ಮೆಲ್ಲರ ಮೇಲಿದೆ. ಈ ಬಗ್ಗೆ ಜಾಗೃತಿ ಮೂಡಿಸಲು ತಾಲೂಕು ಕಸಾಪ ಪ್ರಜಾಪ್ರಭುತ್ವದ ಉಳಿವಿಗೆ ಮತದಾನದ ಮಹತ್ವ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.
ತಾಲೂಕು ಕಸಾಪ ಅಧ್ಯಕ್ಷ ಎಂ.ಬಸವರಾಜಪ್ಪ ಮಾತನಾಡಿ, ಪ್ರಸ್ತುತ ನಡೆಯುತ್ತಿರುವ ಎಸ್​ಐಆರ್​ ಪ್ರಕ್ರಿಯೆಯನ್ನು ರ್ನಿಲಕ್ಷಿಸದೇ ಮತಪಟ್ಟಿಯಲ್ಲಿ ನಿಮ್ಮ ಪಾಲಕರ ಹೆಸರು ಕಡ್ಡಾಯವಾಗಿ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿ ವಿದ್ಯಾರ್ಥಿಗಳದ್ದಾಗಿದೆ. ಈ ಕುರಿತು ತಮ್ಮ ಪಾಲಕರಲ್ಲಿ ಜಾಗೃತಿ ಮೂಡಿಸಬೇಕಿದೆ. ಪ್ರಬಂಧಸ್ಪರ್ಧೆಯಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net