ಕಾಡುಗೊಲ್ಲ ಸಮುದಾಯ ಎಸ್ಟಿಗೆ ಸೇರಿಸಲು ಮನವಿ

ಕೇಂದ್ರ ಗೃಹ ಸಚಿವ ಅಮಿತ್​ ಷಾರನ್ನು ದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿಯಾದರು.
ಕೇಂದ್ರ ಗೃಹ ಸಚಿವ ಅಮಿತ್​ ಷಾರನ್ನು ದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿಯಾದರು.
Published on

ಪ್ರಮುಖ ಮುಖ್ಯಾಂಶಗಳು

  • ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ನಿರ್ದೇಶನ ಕೊಡಿ
  • ಕೇಂದ್ರ ಗೃಹ ಸಚಿವ ಅಮಿತ್​ ಷಾಗೆ ವಿ.ಸೋಮಣ್ಣ ಮನವಿ
  • ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪ್ರಗತಿ ಸಾಧ್ಯ
ತುಮಕೂರು:

ರಾಜ್ಯದ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್​ಟಿ) ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಭಾರತದ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್​ ಷಾರನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮನವಿ ಮಾಡಿದರು.

ದೆಹಲಿಯಲ್ಲಿ ಗುರುವಾರ ಗೃಹಸಚಿವಾಲಯದ ಕಚೇರಿಯಲ್ಲಿ ಅಮಿತ್​ ಷಾರನ್ನು ಭೇಟಿಯಾದ ಸೋಮಣ್ಣ, ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕೋರಿದರಲ್ಲದೆ, ಕರ್ನಾಟಕದ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರ್ಪಡೆ ಮಾಡುವುದರಿಂದ ಅತ್ಯಂತ ಹಿಂದುಳಿದಿರುವ ಈ ಸಮುದಾಯಕ್ಕೆ ಸಂವಿಧಾನದ ಆಶಯದಂತೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿ ಸಾಧ್ಯವಾಗಲಿದೆ ಎನ್ನುವ ಬಗ್ಗೆ ಗಮನಸೆಳೆದರು.
ಕಾಡುಗೊಲ್ಲ ಸಮುದಾಯನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮಕೃಗೊಳ್ಳುವ ಕುರಿತು ಮಾರ್ಚ್​ 25 ರಂದೇ ಕೇಂದ್ರ ಗೃಹ ಸಚಿವ ಅಮಿತ್​ ಷಾಗೆ ಸೋಮಣ್ಣ ಮನವಿ ಸಲ್ಲಿಸಿದ್ದರು. ಆ ಮನವಿಯನ್ನು ಕೇಂದ್ರ ಗೃಹ ಇಲಾಖೆಯು ಭಾರತದ ರಿಜಿಸ್ಟ್ರಾರ್​ ಜನರಲ್​ ಕಚೇರಿ (ಒಆರ್​ಜಿಐ) ಗೆ ವರ್ಗಾಯಿಸಿತ್ತು. ಇದೀಗ, ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತು ಪರಿಶೀಲಿಸಲು ಭಾರತದ ರಿಜಿಸ್ಟ್ರಾರ್​ ಜನರಲ್​ ಕಚೇರಿಯು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲತಯಕ್ಕೆ ರವಾನಿಸಿದೆ.
ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ ಮಾಡುವುದರಿಂದ ಅತ್ಯಂತ ಹಿಂದುಳಿದಿರುವ ಈ ಸಮುದಾಯ ಸಾಮಾಜಿಕ, ಶೃಕ್ಷಣಿಕ ಮತ್ತು ಆರ್ಥಿಕ ಉನ್ನತಿಗೆ ಸಹಾಯವಾಗಲಿದೆ. ಕೇಂದ್ರ ಗೃಹಸಚಿವ ಅಮಿತ್​ ಷಾಗೆ ಮನವಿ ಮಾಡಿಕೊಂಡು ಸಲ್ಲಿಸಿದ ಪ್ರಸ್ತಾವನೆಯನ್ನು ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಪರಿಶೀಲಿಸಲು ಕಳುಹಿಸಲಾಗಿದೆ.
ವಿ.ಸೋಮಣ್ಣ
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net