ಗುಬ್ಬಿ ಸರ್ಕಾರಿ ಕಾಲೇಜಿನಲ್ಲಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಡಾ.ಎಂ.ಗೋವಿಂದರಾಯ ಅವರನ್ನು ಸನ್ಮಾನಿಸಲಾಯಿತು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಅರುಣಾ ಕುವಾರಿ, ಇತಿಹಾಸ ವಿಭಾಗದ ಮುಖ್ಯಸ್ಥ ತಿಮ್ಮೇಗೌಡ, ಪ್ರಾಧ್ಯಾಪಕರಾದ ಕಾಳಪ್ಪ, ಎಚ್.ಜ್ಯೋತಿ ಲಕ್ಷ್ಮೀ, ಕಂಚಿರಾಯಪ್ಪ, ಗ್ರಂಥಪಾಲಕ ಡಾ.ರಾವೇಂದ್ರ ಇತರರು ಇದ್ದರು.
ವಿದ್ಯಾರ್ಥಿಗಳು ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಎಂ.ಗೋವಿಂದರಾಯ ಕರೆ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ(ಸ್ವಾಯತ್ತ) ಕಾಲೇಜಿನಲ್ಲಿ ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಚರಿತ್ರೆ ಒಂದು ಅವಲೋಕನ ಎಂಬ ವಿಷಯದ ಉಪನ್ಯಾಸದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ನಿರಂತರ ಅಧ್ಯಯನ ವಾಡಬೇಕು.
ನೈತಿಕ ಮೌಲ್ಯ ಮೈಗೂಡಿಸಿಕೊಂಡು ಗುರು-ಹಿರಿಯರಿಗೆ ಗೌರವ ನೀಡಬೇಕು. ಮನಸ್ಸಿನಲ್ಲಿ ಇರುವುದನ್ನು ನೇರವಾಗಿ ಹೇಳಿದರೆ ಪರಿಹಾರ ಕಂಡುಕೊಳ್ಳಬಹುದು. ಗುಬ್ಬಿ ತಾಲೂಕು ಸಾಹಿತ್ಯ ಪರಂಪರೆಯಲ್ಲಿ ಸಮೃದ್ಧಿಯಿಂದ ಕೂಡಿದ್ದು, ತಾವೂ ಸಹ ಶಿಕ್ಷಣ ಪಡೆದು, ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುವುದು ಅಗತ್ಯ ಎಂದರು.
ಪ್ರಾಂಶುಪಾಲ ಡಾ. ಓ.ನಾಗರಾಜು ವಾತನಾಡಿ, ಜ್ಞಾನಿಗಳಿಂದ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದಾಗ ಜ್ಞಾನಾರ್ಜನೆಗೆ ಅನುಕೂಲವಾಗುತ್ತದೆ. ವಿದ್ಯಾರ್ಥಿಗಳು ನಿರಂತರ ಹೊಸ ಸಾಹಿತ್ಯ ಅಧ್ಯಯನದಲ್ಲಿ ತೊಡಗಬೇಕು ಎಂದರು.