ನಗರದ ಗಾಜಿನಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ 2 ದಿನಗಳ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಮತ್ತು ವಾಣಿಜ್ಯ ಮೇಳವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಸುಮಾರು 20ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದ್ದು ತುಮಕೂರು ಜಿಲ್ಲೆಯೊಂದರಲ್ಲೇ 1.70 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರಾಗಿ, ನವಣೆ, ಸಾಮೆ, ಕೊರಲೆ ಸೇರಿದಂತೆ ಎಲ್ಲ ತರಹದ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ. ಕಲ್ಪತರು ನಾಡು ಸಿರಿಧಾನ್ಯಗಳ ಖಣಜವಾಗಿ ಮಾರ್ಪಟ್ಟಿದೆ ಎಂದರು.