ಆದರೆ, ಇದಕ್ಕೂ ಪೂರ್ವದಲ್ಲಿ ಜಿಪಂ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ವಿ.ಸೋಮಣ್ಣ, ದೇಶದಲ್ಲಿ ವಿಬಿ ರಾಮ್ ಜಿ ಜುಲೈ 1ರಿಂದ ಜಾರಿಗೆ ಬರಲಿದ್ದು ಮನರೇಗಾ ಬಾಕಿ ಬಿಲ್ ಕೂಡ ನೀಡಲಾಗುವುದು, ತುಮಕೂರು ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳನ್ನು ಪಟ್ಟಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.