ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಎಸ್ಒ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ, ನೀಟ್ 2026ರ ಪ್ರಶ್ನೆಪತ್ರಿಕೆ ಸೋರಿಕೆ ಯಾವುದೋ ಆಕಸ್ಮಿಕ ಘಟನೆ ಅಲ್ಲ. 2022, 2024 ಹಾಗೂ ಈಗ 2026ರಲ್ಲೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಬೆಳಕಿಗೆ ಬದಿದ್ದು, ಪರೀಕ್ಷಾ ವ್ಯವಸ್ಥೆಯ ವೈಲ್ಯವನ್ನು ಬಹಿರಂಗಪಡಿಸಿವೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಯುತ್ತಿದ್ದರೂ, ಕೇಂದ್ರ ಶಿಕ್ಷಣ ಸಚಿವರಿಂದ ಹಿಡಿದು ಎನ್ಟಿಎ ನ ಯಾರೊಬ್ಬರು ಜವಾಬ್ದಾರಿ ಹೊರಲು ತಯಾರಿಲ್ಲ. ಭ್ರಷ್ಟಾಚಾರ ತಡೆಗಟ್ಟುವ ಹೆಸರಿನಲ್ಲಿ ಜಾರಿಯಾದ ನೀಟ್ ಈಗ ಕೋಟ್ಯಂತರ ರೂಪಾಯಿಗಳ ಕೋಚಿಂಗ್ ಉದ್ಯಮಕ್ಕೆ ದಾರಿ ಮಾಡಿಕೊಟ್ಟಿದೆ. ಶಿಕ್ಷಣ ಹಕ್ಕಾಗಿರದೆ ವ್ಯಾಪಾರದ ವಸ್ತುವಾಗಿ ಮಾರ್ಪಡುತ್ತಿದೆ ಎಂದು ವಾಗ್ಧಾಳಿ ನಡೆಸಿದರು.