ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಚಾಲನಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 5 ವರ್ಷದೊಳಗಿನ 1,86,969 ಮಕ್ಕಳಿದ್ದು, 1211 ಲಸಿಕಾ ಕೇಂದ್ರಗಳಲ್ಲಿ ಡಿಸೆಂಬರ್ 21ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಪ್ರಾರಂಭವಾಗಲಿದೆ. ಡಿಸೆಂಬರ್ 22 ಮತ್ತು 23ರಂದು ಗ್ರಾಮೀಣ ಪ್ರದೇಶ, ಡಿಸೆಂಬರ್ 22, 23 ಹಾಗೂ 24ರಂದು ನಗರ ಪ್ರದೇಶದಗಳಲ್ಲಿ ಮನೆ-ಮನೆಗೆ ಭೇಟಿ ನೀಡಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುವುದು ಎಂದರು.