ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆ

Nature conservation is the responsibility of us all.
Nature conservation is the responsibility of us all.
Published on
ಪಾವಗಡ: ಪ್ರಕೃತಿ ಜೀವ ಸಂಕುಲಕ್ಕೆ ಹಲವು ಕೊಡುಗೆ ನೀಡಿದ್ದು, ಅದರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಹೇಶ್​ ತಿಳಿಸಿದರು.
ತಾಲೂಕಿನ ವೈ.ಎನ್​.ಹೊಸಕೋಟೆ ಹೋಬಳಿ ಸೂಲನಾಯಕನಹಳ್ಳಿಯ ನಲ್ಲಾರಿಸ್ವಾಮಿ ದೇವಸ್ಥಾನದ ಆವರಣದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಸಂಘದಿಂದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಾವೆಲ್ಲರೂಪರಿಸರ ಸಂರಕ್ಷಣೆಗೆ ಮುಂದಾದಾಗ ಮಾತ್ರ ಮನುಕುಲ ಉಳಿಯುತ್ತದೆ. ಆರೋಗ್ಯಕರ ಜೀವನ ನಡೆಸಬೇಕಾದರೆ ಉತ್ತಮ ವಾತಾವರಣ ನಿಮಾರ್ಣವಾಗಬೇಕಿದೆ. ಪ್ರತಿಯೊಬ್ಬರೂ ಗಿಡ ನೆಟ್ಟು ನಿತ್ಯ ನೀರುಣಿಸಿ ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸಬೇಕು ಎಂದು ತಿಳಿಸಿದರು.
ನಲ್ಲಾರಿ ಸ್ವಾಮಿ ದೇವಸ್ಥಾನದ ಹೃದಯಾನಂದ ಸ್ವಾಮೀಜಿ ಮಾತನಾಡಿ, ಪರಿಸರ ನಾಶದಿಂದ ಸರಿಯಾಗಿ ಮಳೆಯಾಗದೆ ರೈತರ ಕೃಷಿ ಚಟುವಟಿಕೆಗೆ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸಲು ನಾವೆಲ್ಲರೂ ಜಾಗೃತರಾಗಿ ಗಿಡಗಳನ್ನು ಹೆಚ್ಚಾಗಿ ಬೆಳೆಸಬೇಕಿದೆ. ಅಲ್ಲದೆ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಮೂಲಕ ರೈತರಿಗೆ ಮತ್ತು ಸಮುದಾಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ನೀಡುತ್ತಿದ್ದು, ಅವು ಸದ್ಬಳಕೆಯಾಗಬೇಕಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net