ತುಮಕೂರು: ಪಾವಗಡ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನಯ್ಯ (60) ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಶುಕ್ರವಾರ ಪಟ್ಟಣದ ಆಪ್ ಬಂಡೆ ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಮೀಟಿಂಗ್ ಹಾಲ್ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಜಂಟಿ ನಿರ್ದೇಶಕ ಕೃಷ್ಣಪ್ಪ ಕಿರುಕುಳದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದೇನೆ ಎಂದುವೀಡಿಯೋ ಮಾಡಿದ್ದಾರೆ.
ಅತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸಹೋದ್ಯೋಗಿಗಳಿಗೆ, ಸಿಬ್ಬಂದಿಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಕಿರುಕುಳವೇ ಸಾವಿಗೆ ಕಾರಣವೆಂದು ವಿಡಿಯೋದಲ್ಲಿ ಉಲ್ಲೇಖಿಸಲಾಗಿದೆ.
ಕಳೆದ 3 ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನಯ್ಯ. ಮೂಲತಃ ಪಾವಗಡ ತಾಲೂಕು ಗುಂಡರ್ಲಾಹಳ್ಳಿ ಗ್ರಾಮದವರು.
ಪತ್ನಿ ಪಾವಗ ಲಡ ಪೊಲೀಸ್ ಠಾಣೆಗೆ ಸಲ್ಲಿಸಿದ್ದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.