ಈ ಸಭೆಯಲ್ಲಿ ಹಿರಿಯ ರೈಲ್ವೆ ಅಧಿಕಾರಿಗಳು, ನೈರುತ್ಯ ರೈಲ್ವೆ ಅಧಿಕಾರಿಗಳು ಭಾಗವಹಿಸಿದ್ದು ಈ ಹೊಸ ರೈಲು ಮಾರ್ಗಗಳು ಹಾಗೂ ರಸ್ತೆ ಮತ್ತು ರೈಲು ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸುವ ಹಾಗೂ ಸಾರಿಗೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಈಗಾಗಲೇ ಬಹುತೇಕ ರೈಲ್ವೆ ಲೆವೆಲ್ ಕ್ರಾಸಿಂಗ್ಗಳಲ್ಲಿ ರಸ್ತೆ ಮೇಲ್ಸೇತುವೆ (ಆರ್ಒಬಿ) ಹಾಗೂ ರಸ್ತೆ ಕೆಳಸೇತುವೆ (ಆರ್ಯುಬಿ) ನಿರ್ಮಾಣ ಕಾಮಗಾರಿಗಳು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಗೆ ಇನ್ನಷ್ಟು ವೇಗ ನೀಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನಿಗದಿತ ಸಮಯದೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೋಮಣ್ಣ ಸೂಚನೆ ನೀಡಿದರು.