ಕಟ್ಟಡ ಕಾರ್ಮಿಕರ ಮಂಡಳಿಯಲ್ಲಿ ನೋಂದಣಿಯಾಗಿ

Registered with the Construction Workers' Council
Registered with the Construction Workers' Council
Published on
ಕೊರಟಗೆರೆ: ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಸಿಕೊಂಡರೆ ಶೈಕ್ಷಣಿಕ ನೆರವು, ಮದುವೆ ಸಹಾಯಧನ ಸೇರಿದಂತೆ ಹಲವು ಸೌಲಭ್ಯಗಳು ದೊರೆಯಲಿವೆ ಎಂದು ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಕಾಂತ್​ ತಿಳಿಸಿದರು.
ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದ ಅಂಬೇಡ್ಕರ್​ ಭವನದಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರ ನಿಮಾರ್ಣ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗಾಗಿ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಅಸಂಘಟಿತ ಕಾರ್ಮಿಕರು ಕಡ್ಡಾಯವಾಗಿ ಇ&-ಶ್ರಮ್​ ಪೋರ್ಟಲ್​ನಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಐಎನ್​ಟಿಯುಸಿ ರಾಜ್ಯಾಧ್ಯಕ್ಷ ಶಾಮಣ್ಣರೆಡ್ಡಿ ಮಾತನಾಡಿ, ಕಾರ್ಮಿಕರ ಹಕ್ಕುಗಳು ಮತ್ತು ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆದರು. ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ 26 ಸಾವಿರ ರೂ. ವೇತನ ನಿಗದಿ ಮಾಡಬೇಕು. ಗುತ್ತಿಗೆ ಪದ್ಧತಿ ರದ್ದುಪಡಿಸಿ ಎಲ್ಲ ಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.
ಇಎಸ್​ಐ ಹಾಗೂ ಪಿಎಫ್​ ಸೌಲಭ್ಯವನ್ನು ಎಲ್ಲ ಕಾರ್ಮಿಕರಿಗೆ ವಿಸ್ತರಿಸಬೇಕು. ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಕಾರ್ಮಿಕರಿಗೆ ಸ್ಥಳಿಯ ಮಟ್ಟದಲ್ಲೇ ಸೌಲಭ್ಯ ದೊರಕುವ ಉದ್ದೇಶದಿಂದ ಆರಂಭಿಸಲಾದ ನೂತನ ಕಚೇರಿಯನ್ನು ಗಣ್ಯರು ಉದ್ಘಾಟಿಸಿದರು. ಗೋವಿಂದರಾಜು, ನರಸಿಂಹಮೂರ್ತಿ, ಗುರುಮೂರ್ತಿ, ಮಂಜುನಾಥ್​, ಸಿದ್ದರಾಜು, ಆನಂದ್​ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net