ಈ ಸಂದರ್ಭದಲ್ಲಿ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ರಾಜ್ಯ ಸರ್ಕಾರವು ಬಜೆಟ್ನಲ್ಲಿ ಘೋಷಿಸಿರುವಂತೆ ಜೂನ್ನಿಂದಲೇ ಹೊಸ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗಿದೆ. ಈ ಶಾಲೆಗಳ 3ರಿಂದ 5 ಕಿ.ಮೀ., ವ್ಯಾಪ್ತಿಯ ಶಾಲೆಗಳನ್ನು ವಿಲೀನಗೊಳಿಸಲಾಗುವುದೆಂದು ಕಳೆದ ಅಕ್ಟೋಬರ್ನಲ್ಲಿ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆ ನಮ್ಮೂರ ಶಾಲೆ ಉಳಿಯಬೇಕು ಮತ್ತು ಕೆಪಿಎಸ್ ಯೋಜನೆ ರದ್ದಾಗಬೇಕೆಂದು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣಉಳಿಸಿ ಸಮಿತಿ ರಚಿಸಿಕೊಂಡು ಕಳೆದ 5 ತಿಂಗಳಿಂದ ಗ್ರಾಮಸ್ಥರು ಹಾಗೂ ಪೋಷಕರು ಹೋರಾಟ ನಡೆಸಿದೆ. ಗ್ರಾಮಮಟ್ಟದಿಂದ ಆರಂಭಿಸಿ ಜಿಲ್ಲಾಮಟ್ಟದ ಹಾಗೂ ರಾಜ್ಯಮಟ್ಟದವರೆಗೂ ಪ್ರತಿಭಟನೆ ಹಾಗೂ ಸಮಾವೇಶಗಳನ್ನು ನಡೆಸಲಾಗಿದೆ. ಜನಗಳ ತೀವ್ರ ವಿರೋಧದ ನಡುವೆಯು ಜನ ವಿರೋಧಿ ಕೆಪಿಎಸ್ ಮ್ಯಾಗ್ನೆಟ್ ನೀತಿಯನ್ನು ಜಾರಿಗೆ ತರುತ್ತಿರುವುದು ಖಂಡನೀಯ ಎಂದರು.