ಈಗಾಗಲೇ 400 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸೇತುವೆ, ಚರಂಡಿ ಕಾಮಗಾರಿ ಮುಗಿದಿವೆ. 1,200 ಕೋಟಿ ರೂ. ವೆಚ್ಚದಲ್ಲಿಮ ನೀರಾವರಿ ಯೋಜನೆ ಕೈಗೊಳ್ಳಲಾಗಿದೆ. ತಾಲೂಕಿನ ಅಭಿವೃದ್ಧಿಗೆ ಡಿ.ಕೆ.ಸುರೇಶ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನನಗೆ ಶಕ್ತಿ ನೀಡಿದರಿಂದ ಸಾಧ್ಯವಾಯಿತು. ಕೇಂದ್ರದ ಮೋದಿ ಸರ್ಕಾರ ಅಗತ್ಯ ವಸ್ತುಗಳಾದ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಸೇರಿದಂತೆ ನಿತ್ಯ ಬಳಸುವ ಎಲ್ಲ ಪದಾರ್ಥಗಳ ಬೆಲೆ ಜಾಸ್ತಿ ಮಾಡಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರ ಜೀವನ ಸ್ಥಿತಿ ದುಸ್ತರವಾಗುತ್ತಿದೆ. ಇಂತಹ ಜನವಿರೋಧಿ ನೀತಿಯನ್ನು ಜನಸಾಮಾನ್ಯರು ಖಂಡಿಸಿ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.