3 ಸಾವಿರ ಬಸ್ಸುಗಳ ವ್ಯವಸ್ಥೆ: ತುಮಕೂರು ನಗರಕ್ಕೆ ಫಲಾನುಭವಿಗಳನ್ನು ಕರೆತರಲು ಸರ್ಕಾರಿ, ಖಾಸಗಿ ಬಸ್ಸುಗಳೂ ಸೇರಿದಂತೆ ಸುಮಾರು 3,000 ಬಸ್ಸುಗಳು ನಗರಕ್ಕೆ ಆಗಮಿಸಲಿದ್ದು, ಫಲಾನುಭವಿಗಳನ್ನು ಕಾರ್ಯಕ್ರಮ ನಡೆಯಲಿರುವ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಬಳಿಯೇ ಇಳಿಸಿ ಪಾರ್ಕಿಂಗ್ಗೆ ನಿಗದಿ ಪಡಿಸಿರುವ ಸ್ಥಳದಲ್ಲಿ ಬಸ್ಗಳನ್ನು ನಿಲ್ಲಿಸಲಾಗುವುದು. ಕಾರ್ಯಕ್ರಮದ ನಂತರ ಫಲಾನುಭವಿಗಳನ್ನು ಕರೆದೊಯ್ಯುವ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ವಾಹನ ಸಂಚಾರ ಅಥವಾ ವಾಹನಗಳ ನಿಲುಗಡೆಗೆ ಸ್ಥಳಾವಕಾಶದ ಕೊರತೆಯಾಗಬಹುದು. ಅದಕ್ಕಾಗಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೂಕ್ತ ನಿಲುಗಡೆ ಪ್ರದೇಶ ಗುರುತಿಸಿ ರ್ನಿದಿಷ್ಟ ತಾಲೂಕುಗಳ ವಾಹನಗಳು ರ್ನಿದಿಷ್ಟ ನಿಲುಗಡೆಯಲ್ಲಿಯೇ ನಿಲ್ಲುವಂತೆ ವ್ಯವಸ್ಥೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.