ತುಮಕೂರು ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಮಾತನಾಡಿ, ಯುವ ಜನಾಂಗ ಮತ್ತು ವಿದ್ಯಾರ್ಥಿಗಳು ತಮ್ಮಲ್ಲಿ ಅತ್ಯುತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ನಿಮ್ಮ ಸಾಧನೆ ಕೇವಲ ಸ್ಥಳಿಯ ಮಟ್ಟಕ್ಕೆ ಸೀಮಿತವಾಗದೆ, ದೇಶದ ಮೂಲೆ ಮೂಲೆಯಲ್ಲೂ ನಿಮ್ಮ ಹೆಸರು ಧ್ವನಿಸುವಂತಾಗಬೇಕು. ಹುಟ್ಟು ಮತ್ತು ಸಾವಿನ ನಡುವಿನ ಅವಧಿಯಲ್ಲಿ ನಮ್ಮ ಜೀವನದ ನಿಜವಾದ ಮೌಲ್ಯವನ್ನು ನಾವು ಅರಿತುಕೊಳ್ಳಬೇಕು. ಪ್ರತಿಯೊಬ್ಬರ ಜೀವನಕ್ಕೂ ಪ್ರಾಮಾಣಿಕತೆ ಎಂಬುದು ಅಗತ್ಯ ಎಂದರು.