ತುಮಕೂರು: ತುಮಕೂರು ವಿಶ್ವವಿದ್ಯಾಲಯದ 19 ನೇ ಘಟಿಕೋತ್ಸವದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ, ಲೆಕ್ಕ ಪರಿಶೋಧಕ ಕೆ.ಆರ್.ಪ್ರದೀಪ್, ಸಾಹಿತಿ ದ್ವಾರನಕುಂಟೆ ಪಾತಣ್ಣ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಘಟಿಕೋತ್ಸವದಲ್ಲಿ ಒಬ್ಬ ಅಭ್ಯರ್ಥಿ ಡಿ.ಲಿಟ್ ಪದವಿ, 59 ಅಭ್ಯರ್ಥಿಗಳು ಪಿ.ಎಚ್.ಡಿ. ಪದವಿ, 2.058 ಸ್ನಾತಕೋತ್ತರ ಹಾಗೂ 8781 ಸ್ನಾತಕ ಪದವಿ ಪ್ರದಾನ ಮಾಡಲಾಯಿತು.
ಬೆಂಗಳೂರು ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಪ್ರೊ.ದೇಬಬ್ರತ ದಾಸ್, ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವರಾದ ನಾಹಿದಾ ಜಮ್ ಜಮ್, ಪ್ರೊ.ಎಚ್.ಎಸ್.ಮೋಹನ್ ಇದ್ದರು.