ಸಾಮಾಜಿಕ ನ್ಯಾಯ ಪರ ವಿದ್ಯಾರ್ಥಿಗಳ ಒಕ್ಕೂಟದ ಎಚ್ಚರಿಕೆ

ತುಮಕೂರಿನಲ್ಲಿ ಸಾಮಾಜಿಕ ನ್ಯಾಯ ಪರ ವಿದ್ಯಾರ್ಥಿಗಳ ಒಕ್ಕೂಟದ "ದುಂಡುಮೇಜಿನ ತುರ್ತು ಸಭೆ' ನಡೆಯಿತು.
ತುಮಕೂರಿನಲ್ಲಿ ಸಾಮಾಜಿಕ ನ್ಯಾಯ ಪರ ವಿದ್ಯಾರ್ಥಿಗಳ ಒಕ್ಕೂಟದ "ದುಂಡುಮೇಜಿನ ತುರ್ತು ಸಭೆ' ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ವಿಶ್ವವಿದ್ಯಾಲಯವನ್ನೇ ಒಂದು ಘಟಕವಾಗಿ ಪರಿಗಣಿಸಿ ರೋಸ್ಟರ್​
  • ಮೀಸಲಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಹುನ್ನಾರ
ತುಮಕೂರು: ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾಲಯವನ್ನೇ ಒಂದು ಘಟಕವಾಗಿ ಪರಿಗಣಿಸಿ ರೋಸ್ಟರ್​ (ಮೀಸಲಾತಿ) ರೂಪಿಸಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ನೀಡಿರುವ ತಾತ್ವಿಕ ಒಪ್ಪಿಗೆ ಅಸಂವಿಧಾನಿಕ ಹಾಗೂ ಮೀಸಲಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಹುನ್ನಾರ ಎಂದು ಸಾಮಾಜಿಕ ನ್ಯಾಯ ಪರ ವಿದ್ಯಾರ್ಥಿಗಳ ಒಕ್ಕೂಟ ಆರೋಪಿಸಿದೆ.
ನಗರದ ಡಾ. ಬಿ.ಆರ್​. ಅಂಬೇಡ್ಕರ್​ ಭವನದಲ್ಲಿ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ 'ದುಂಡುಮೇಜಿನ ತುರ್ತು ಸಭೆ'ಯಲ್ಲಿ, ಸರ್ಕಾರ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ರಾಜ್ಯಾದ್ಯಂತ ಕ್ರಾಂತಿಕಾರಿ ಪ್ರತಿಭಟನೆ ರೂಪಿಸಲಾಗುವುದು ಎಂದು ಎಚ್ಚರಿಕೆ ರವಾನಿಸಿದೆ.
ವಕೀಲ ರಂಗಧಾಮಯ್ಯ ಮಾತನಾಡಿ, "ನೇಮಕಾತಿಯಲ್ಲಿ ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಮಾಡುವುದು ಸಂವಿಧಾನದ ವಿಧಿ 14(1) ಮತ್ತು 16(4)ರ ಸ್ಪಷ್ಟ ಉಲ್ಲಂಘನೆಯಾಗಿದೆ. 2017ರಲ್ಲಿ ಅಲಹಾಬಾದ್​ ಹೈಕೋರ್ಟ್​ ಹಾಗೂ ತದನಂತರ ಸುಪ್ರೀಂಕೋರ್ಟ್​ ಕೂಡ ವಿಶ್ವವಿದ್ಯಾಲಯಗಳನ್ನು ಘಟಕವಾಗಿ ಪರಿಗಣಿಸಬಾರದು, ಇದು ಅಸಂವಿಧಾನಿಕ ಎಂದು ತೀರ್ಪು ನೀಡಿವೆ. ಸುಪ್ರೀಂಕೋರ್ಟ್​ ಆದೇಶಕ್ಕೂ ಬೆಲೆಕೊಡದೆ ಇಂತಹ ನಿರ್ಧಾರ ಕೈಗೊಳ್ಳುವುದು ಸಾಮಾಜಿಕ ನ್ಯಾಯಕ್ಕೆ ಬಗೆಯುವ ದ್ರೋಹವಾಗಿದೆ ಎಂದರು.
ಒಳ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ವೈ.ಕೆ.ಬಾಲಕೃಷ್ಣಪ್ಪ ಮಾತನಾಡಿ, "ಸಂವಿಧಾನದ ಆಶಯಗಳಿಗೆ ಬದ್ಧವಾಗಿರಬೇಕಾದ ಸಮಾಜ ಕಲ್ಯಾಣ ಇಲಾಖೆ ಇಂತಹ ಮೀಸಲಾತಿ ವಿರೋಧಿ ಕಾನೂನು ರೂಪಿಸಲು ಉತ್ಸುಕರಾಗಿರುವುದು ದುರಂತ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮಾನತೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಸರ್ಕಾರದ ಈ ನಿರ್ಧಾರದ ವಿರುದ್ಧ ಶೋಷಿತ ಹಾಗೂ ಹಿಂದುಳಿದ ವರ್ಗಗಳು ಎಚ್ಚೆತ್ತುಕೊಳ್ಳಬೇಕಿದೆ ಎಂದರು.
ವಿದ್ಯಾರ್ಥಿ ಒಕ್ಕೂಟದ ಮುಖಂಡರಾದ ಗಂಗಾಧರ್​ ಬಾಣಸಂದ್ರ, ಪಿ.ಆರ್​.ನವೀನ್​ಕುಮಾರ್​ , ಧರ್ಮಣ್ಣ ಎಂ.ರಂಗನಾಥ್​,ಭೀಮ್​ ಶಿ, ಎಂ.ಟಿ.ರಮೇಶ್​, ಮಾರುತೇಶ್​ ಹಾಗೂ ಸುರೇಶ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ಕಾರ ಸಾಮಾಜಿಕ ನ್ಯಾಯದ ವಿರುದ್ಧ ಯಾವುದೇ ತೀಮಾರ್ನ ಕೈಗೊಳ್ಳಬಾರದು ಎಂದರು.
ಸಭೆಯಲ್ಲಿ ಕೆ.ದೊರೈರಾಜು, ಡಾ.ಬಸವರಾಜು, ಕೊಟ್ಟ ಶಂಕರ್​, ವೈ.ಎಚ್​.ಹುಚ್ಚಯ್ಯ ಹಾಗೂ ಚಿಂತಕ ಡಾ.ರವಿಕುಮಾರ್​ ನೀಹ, ಕುಂದೂರು ಮುರುಳಿ, ಪಿ ರಾಮಯ್ಯ, ಹೆತ್ತೇನಹಳ್ಳಿ ಮಂಜುನಾಥ್​,ಪವನ್​ , ಶಿವಣ್ಣ ತಿಮ್ಮಲಾಪುರ ,ಜಯರಾಮ್​ ,ನಟರಾಜ್​, ಶ್ರೀನಿವಾಸ್​ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net