ಶೀಬಿ ದೇವಸ್ಥಾನಕ್ಕೆ ಸುಧಾ ಯಾದವ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ವಿಶಿಷ್ಟ ವಾಸ್ತುಶಿಲ್ಪ ಮತ್ತು ಸುಂದರ ಭಿತ್ತಿಚಿತ್ರಗಳಿಗೆ ಪ್ರಸಿದ್ಧ
Karnataka New Governor Dr.Sudha Yadav visit Historical Seebi Narashimaswamy Temple.
ರಾಜ್ಯಪಾಲರಾದ ಡಾ. ಸುಧಾ ಯಾದವ್ ಜಿಲ್ಲೆಯ ಐತಿಹಾಸಿಕ ಶ್ರೀ ಶೀಬಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
Published on: 

ತುಮಕೂರು: ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಜಿಲ್ಲೆಯ ಐತಿಹಾಸಿಕ ಶ್ರೀ ಶೀಬಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಈ ದೇವಸ್ಥಾನವು ತನ್ನ ವಿಶಿಷ್ಟ ವಾಸ್ತುಶಿಲ್ಪ ಮತ್ತು ರಾಮಾಯಣ, ಮಹಾಭಾರತ ಹಾಗೂ ಭಾಗವತದ ಪ್ರಸಂಗಗಳನ್ನು ಬಿಂಬಿಸುವ ಸುಂದರ ಭಿತ್ತಿಚಿತ್ರಗಳಿಗೆ ಪ್ರಸಿದ್ಧವಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.