

ತುಮಕೂರು: ರಾಜ್ಯದ ಯುವನಿಧಿ ಯೋಜನೆಯಡಿ ಅಭ್ಯರ್ಥಿಗಳು ಪ್ರಯೋಜನ ಪಡೆಯಲು ಪ್ರತಿ ತಿಂಗಳು 25ನೇ ತಾರೀಕಿನೊಳಗೆ ತಾನು ನಿರುದ್ಯೋಗಿ ಎಂದು ಹಾಗೂ ವ್ಯಾಸಂಗ ಮುಂದುವರೆಸುತ್ತಿಲ್ಲ ಎಂದು, ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆ ಮಾಡಬೇಕಾಗಿದೆ.
ಮಾರ್ಚ್, ಏಪ್ರಿಲ್, ಮೇ ಹಾಗೂ ಜೂನ್ ವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಘೋಷಣೆಮಾಡಿಕೊಳ್ಳಲು ಮಾಹಿತಿಗೆ ದೂ.0816 2278488 ಸಂಪರ್ಕಿಸಿ.