ದ್ವಿಚಕ್ರವಾಹನ, ಲಾರಿ ಮುಖಾಮುಖಿ ಒಂದೇ ಕುಟುಂಬ ಮೂವರ ದುರ್ಮರಣ

02ACCIDENT
Published on

ತುಮಕೂರು: ಕೊರಟಗೆರೆ ತಾಲೂಕಿನ ಅರಸಾಪುರ ಗೇಟ್‌ನಲ್ಲಿ ಸೋಮವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದ್ವಿಚಕ್ರವಾಹನ ಹಾಗೂ ಲಾರಿ ನಡುವೆ ಮುಖಾಮುಖಿಯಾಗಿದ್ದು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಮಧುಗಿರಿ ತಾಲೂಕು ವೀರೇನಹಳ್ಳಿ ತಾಂಡದ ಅನಿತಾ (40), ಬಾಲಾಜಿ (18), ಪವನ್(20) ಮೃತ ದುರ್ದೈವಿಗಳು. ಶವಗಳನ್ನು ಕೊರಟಗೆರೆ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net