

ತುಮಕೂರು: ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಅರಿವು ರಿನಿವಲ್ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಇಂಜಿನಿಯರಿAಗ್ ಮತ್ತು ಟೆಕ್ನಾಲಜಿ ಮತ್ತಿತರ ಕೋರ್ಸ್ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಸಾಲ ಪಡೆಯಲು ಅಪೇಕ್ಷಿಸುವ ವಿದ್ಯಾರ್ಥಿಗಳು ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.2 ರಷ್ಟನ್ನು ಪಾವತಿಸಿ ನಿಗಮದ Kmdconline.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.