ಸಂಪುಟ ಸಭೆಯಲ್ಲಿ ಬರಪೀಡಿತ ತಾಲೂಕುಗಳ ಘೋಷಣೆ ಶೀಘ್ರ; ಡಾ.ಜಿ.ಪರಮೇಶ್ವರ

Param_kORATAGERE_cONGRS
Published on

ತುಮಕೂರು: ರಾಜ್ಯದಲ್ಲಿ 7 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಈ ಬಗ್ಗೆ ತಾಲೂಕುವಾರು ಮಾಹಿತಿ ಪಡೆಯಲಾಗಿದ್ದು, ಜಿಲ್ಲೆಗಳ ಸರ್ಕಾರ ಅಂಕಿ ಅಂಶಗಳನ್ನು ಪರಿಶೀಲಿಸಿ ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ತೆಂಗು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು ರಾಜ್ಯ ಸರ್ಕಾರ ಕೊಬ್ಬರಿಗೆ ಪ್ರೋತ್ಸಾಹಧನ ಘೊಷಣೆ ಮಾಡಿz್ದೆÃವೆ, ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೆಂಬಲ ಹೆಚ್ಚಿಸಬೇಕು ಎಂದು ಪರಮೇಶ್ವರ್ ಆಗ್ರಹಿಸಿದರು.

ತುಮಕೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಬಗ್ಗೆ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆಯಷ್ಟೇ. ಭವಿಷ್ಯದಲ್ಲಿ ಕರ್ಗೋ ಏರ್‌ಪೋರ್ಟ್ ನಿರ್ಮಾಣವಾಗಬಹುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net