

ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಪಿಯು ಕಾಲೇಜು ಮತ್ತು ಮೌಲಾನಾ ಆಜಾದ್ ಪಿಯು ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆ ಹಾಗೂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಮೇ.19ರೊಳಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ. ತುಮಕೂರು- ಇವರಿಗೆ ಸಲ್ಲಿಸಬಹುದು.
ಮಾಹಿತಿಗೆ ದೂ.0816- 2273724 ಸಂಪರ್ಕಿಸಿ.