

ಗುಬ್ಬಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 3 ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಿ.ಎಸ್.ಪುರ ನಾಡಕಚೇರಿ ಹಿಂಭಾಗದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಗುಬ್ಬಿ ಪಟ್ಟಣ ಮಾರುತಿ ನಗರದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಹೇರೂರಿನಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆಸಕ್ತ 5 ರಿಂದ 10ನೇ ತರಗತಿಯ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ದೂ.08131 222456 ಸಂಪರ್ಕಿಸಿ.