

ತುಮಕೂರು: ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಜಾರಿ, ಕೆಲಸದ ಸಂದರ್ಭದಲ್ಲಿ ಗಾಯಗೊಂಡು ಮೃತಪಟ್ಟ ನೌಕರರಿಗೆ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೂ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಅಕ್ಷರ ದಾಸೋಹ ಬಿಸಿಯೂಟ ತಯಾರಕರು, ಇತ್ತೀಚಗೆ ಸಾಂಬಾರ್ ಪಾತ್ರೆ ಇಳಿಸುವಾಗ ನಡೆದ ಅವಘಡದಲ್ಲಿ ಮೃತಪಟ್ಟ ಮುಂಡಗೋಡದ ಅನ್ನಪೂರ್ಣಮ್ಮ ಕುಟುಂಬಕ್ಕೆ ಪರಿಹಾರವಾಗಿ 25ಲಕ್ಷ ರೂ. ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಮಾವೇಶಗೊಂಡ ಅಕ್ಷರದಾಸೋಹ ಬಿಸಿಯೂಟ ನೌಕರರನ್ನು ಉz್ದೆÃಶಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಕಾಂತರಾಜು, ಕಳೆದ 25 ವರ್ಷಗಳಿಂದ ಅಕ್ಷರ ದಾಸೋಹ ನೌಕರರಿಗೆ ಕನಿಷ್ಠ ವೇತನ ನಿಗಧಿಗೊಳಿ ಸುವಂತೆ ಒತ್ತಾಯಿಸುತ್ತಲೇ ಬಂದಿz್ದÉÃವೆ.ಆದರೆ, ಇದುವರೆಗೂ ಸರಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದರು.
ಮಾಸಿಕ 6500 ರೂ. ಅತ್ಯಂತ ಕಡಿಮೆ ವೇತನಕ್ಕೆ ಇಡೀ ದಿನ ದುಡಿಯುತಿದ್ದಾರೆ.ಇದರ ಮಧ್ಯೆ ಎಸ್‌ಡಿಎಂಸಿ ಅವರ ಕಿರುಕುಳವೂ ನಿಂತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದರು.
ಎಐಟಿಯುಸಿ ಮುಖಂಡ ಆಶ್ವಥನಾರಾಯಣ್ ಮಾತನಾಡಿ, ಅಕ್ಷರ ದಾಸೋಹ ಬಿಸಿಯೂಟ ನೌಕರರು ಬೆಂಕಿ ಅನಾಹುತ, ಮತ್ತಿತರ ಅವಘಡಗಳಿಂದ ಮೃತಪಟ್ಟವರಿಗೆ, ಗಾಯಗೊಂಡವರಿಗೆ ಪರಿಹಾರ ನೀಡಬೇಕೆಂಬುದು ಎಐಟಿಯುಸಿಯ ಆಗ್ರಹವಾಗಿದೆ ಎಂದರು.
ಮುಖ್ಯ ಶಿಕ್ಷಕ, ಮುಖ್ಯ ಅಡುಗೆಯವರ ಹೆಸರಿನಲ್ಲಿ ಬ್ಯಾಂಕ್ ಖಾತೆ ಮುಂದುವರೆಸಬೇಕು. 2022-23ನೇ ಸಾಲಿನ ಬಜೆಟ್‌ನಲ್ಲಿ ಸರಕಾರ ಘೋಷಿಸಿದ್ದ ಒಂದು ಸಾವಿರ ರೂ .ವೇತನ ಹೆಚ್ಚಳ ಕೂಡಲೇ ಜಾರಿಗೊಳಿಸಬೇಕು ಎಂದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ರಾಧಮ್ಮ, ಮುಖಂಡರಾದ ಎ.ಬಿ.ಉಮಾದೇವಿ, ಗುಬ್ಬಿ ವನಜಾಕ್ಷಿ, ಶಿರಾ ಪುಷ್ಪಲತಾ, ಸಾವಿತ್ರಮ್ಮ, ಲಕ್ಷಿö್ಮÃ ಮತ್ತಿತರರು ನೇತೃತ್ವ ವಹಿಸಿದ್ದರು.