ಕಾವೇರಿ ವಿಚಾರದಲ್ಲಿ ರಾಜ್ಯದ ವಾಸ್ತವ ಸ್ಥಿತಿ ಹೇಳಿದರೆ ಅಧಿಕಾರ ಹೋಗುವುದಿಲ್ಲ: ಬಸವರಾಜ ಬೊಮ್ಮಾಯಿ

BOMMAI (2)
Published on

ತುಮಕೂರು: ತಮಿಳುನಾಡಿಗೆ ನೀರು ಬಿಡದಿದ್ದರೆ ನಮ್ಮ ಅಧಿಕಾರ ಹೋಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ, ಅಧಿಕಾರಕ್ಕಾಗಿ ರಾಜ್ಯದ ಹಿತ ಬಲಿ ಕೊಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹರಿಹಾಯ್ದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಬಹಿರಂಗ ಹೇಳಿಕೆ ನಿಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು. ಕೊರ್ಟ್ ನಲ್ಲಿ ವಾದ ಮಾಡಬೇಕು. ಸುಪ್ರೀಂಕೋರ್ಟ್ನಲ್ಲಿ ವಾಸ್ತವ ಸ್ಥಿತಿ ಹೆಳಿದರೆ ನ್ಯಾಯಾಂಗ ನಿಂದನೆ ಆಗುವುದಿಲ್ಲ, ಇವರ ಅಧಿಕಾರ ಕೂಡ ಹೋಗುವುದಿಲ್ಲ ಎಂದರು.

ಕಾಂಗ್ರೆಸ್ ಸರ್ಕಾರ ಈಗಾಗಲೇ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ, ಎಚ್.ಡಿ.ಕುಮಾರಸ್ವಾಮಿಯವರು ಎರಡು ಬಾರಿ ಸಿಎಂ ಆದವರು, ಎರಡು ಬಾರಿ ಅಧಿಕಾರ ಕಳೆದುಕೊಂಡಿದ್ದಾರೆ, ಅವರು ಕೂಡ ಇದನ್ನೇ ಅವರ ಅನುಭವದ ಮಾತುಗಳಲ್ಲಿ ಹೇಳಿದ್ದಾರೆ ಎಂದರು.
ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಕಾರಣಕ್ಕೆ ಹಿಂದೂ ಕಾರ್ಯಕರ್ತನ ಬಂಧನ ಮಾಡಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರದ ಅವಧಿಯಲ್ಲಿ ಫೇಕ್‌ನ್ಯೂಸ್ ಹೆಸರಿನಲ್ಲಿ ಬೆದರಿಕೆ ಹಾಕುವ ಕೆಲಸ ನಡೆಸಲಾಗುತ್ತಿದೆ ಎಂದು ದೂರಿದರು.

ಫೇಕ್‌ನ್ಯೂಸ್ ಎಂದು ಹೇಳಿ ಎಲ್ಲರನ್ನು ಬೆದರಿಸಿ ಬೇರೆ ಜಿಲ್ಲೆಗಳಿಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡುತ್ತಿದ್ದಾರೆ ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಸರ್ಕಾರ ಪರಿಣಾಮ ಎದುರಿಸಲಿದೆ:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net