

ತುಮಕೂರು: ಜಿಲ್ಲಾಸ್ಪತ್ರೆ ಆವರಣದಲ್ಲಿ ಆರಂಭವಾಗಲಿರುವ ನೂತನ ಟ್ರಾಮ ಕೇರ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿ ನೇಮಕ ಪ್ರಕ್ರಿಯೆ ತಡೆಹಿಡಿಯಲಾಗಿದೆ.
ಜಿಲ್ಲಾಸ್ಪತ್ರೆ ಶಸ್ತçಚಿಕಿತ್ಸಕಿ ಡಾ.ವೀಣಾ ಅಗತ್ಯವಿರುವ ಸಿಬ್ಬಂದಿ ನೇಮಕಕ್ಕೆ ನೇರ ಸಂದರ್ಶನಕ್ಕೆ ಆಹ್ವಾನಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದರು. ಅರ್ಜಿ ಕರೆದ ಒಂದೇ ದಿನಕ್ಕೆ ನೇಮಕಾತಿ ಪ್ರಕ್ರಿಯೆಯನ್ನು ಹಿಂಪಡೆಯಲಾಗಿದೆ.
ನೇಮಕಾತಿ ವಿಷಯಕ್ಕೆ ಈ ತರಾತುರಿ ಬೆಳವಣಿಗೆಗೆ ಜಿಲ್ಲಾಸ್ಪತ್ರೆ ವತಿಯಿಂದ ಪ್ರಕಟಣೆಯಲ್ಲಿ ಸ್ಪಷ್ಟ ಕಾರಣ ನೀಡಿಲ್ಲ.