ತುಮಕೂರಿನಲ್ಲಿ 10 ಸಾವಿರ ಬೀದಿ ನಾಯಿ; ನಗರವಾಸಿಗಳು ಹೈರಾಣ

DOG1
Published on

ತುಮಕೂರು: ನಗರವಾಸಿಗಳ ನೆಮ್ಮದಿ ಕಸಿದಿರುವ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಜಿಲ್ಲಾಡಳಿತ ತಡವಾಗಿಯಾದರೂ ಮನಸ್ಸು ಮಾಡಿದೆ. ಜಿಲ್ಲಾ ಪ್ರಾಣಿದಯಾ ಸಂಘದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಈ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದರು.

ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿರವ 10 ಸಾವಿರಕ್ಕೂ ಹೆಚ್ಚು ಬೀದಿನಾಯಿಗಳಿಂದ ನಾಗರೀಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಹೆಚ್ಚಾಗಿವೆ ಎಂದರು.

ಸಭೆಯಲ್ಲಿ ನಿರ್ಣಯಿಸಿದ ನಡವಳಿ ಸಮಗ್ರ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು, ನಾಮ್‌ಕೆವಾಸ್ತಗೆ ಸಭೆ ನಡೆಸಿ ದಾಖಲೆಗಳನ್ನು ಸೃಷ್ಠಿಸಿಕೊಂಡರೆ ಪ್ರಯೋಜನವಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಹಿರಿಯ ನಾಗರಿಕರು, ಮಕ್ಕಳು, ಅಶಕ್ತರು, ಹಾಗೂ ಸಾರ್ವಜನಿಕರು ಸಂಚಾರ ಮಾಡುವಾಗ ನಾಯಿಗಳಿಂದ ತೊಂದರೆಯಾಗದAತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು, ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂತಾನಹರಣ ಶಸ್ತçಚಿಕಿತ್ಸೆ ಪ್ರಮುಖ ಅಸ್ತçವಾಗಿದೆ ಎಂದರು.

10 ಸಾವಿರಕ್ಕೂ ಹೆಚ್ಚು ಬೀದಿ ನಾಯಿಗಳಿವೆ:

ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆ ಉಪ ನಿರ್ದೇಶಕ ಹಾಗೂ ಜಿಲ್ಲಾ ಪ್ರಾಣಿದಯಾ ಸಂಘ ಸದಸ್ಯ ಕಾರ್ಯದರ್ಶಿ ಡಾ.ಗೀರಿಶ್‌ಬಾಬು ರೆಡ್ಡಿ ಮಾತನಾಡಿ, ತುಮಕೂರು ನಗರದಲ್ಲಿ 2020ರ ಪ್ರಾಣಿ ಗಣತಿ ಅನುಸಾರ ಎರಡು ಸಾವಿರ ನಾಯಿಗಳಿವೆ ಎಂದು ಮಾಹಿತಿ ನೀಡಿದರು.

ಪ್ರಸ್ತುತ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು ಅಂದಾಜಿನ ಪ್ರಕಾರ 10 ಸಾವಿರಕ್ಕೂ ಹೆಚ್ಚು ಬೀದಿ ನಾಯಿಗಳಿವೆ, ಕೋಳಿ ತ್ಯಾಜ್ಯ ಹಾಗೂ ಬೀದಿನಾಯಿಗಳಿಗೆ ನಿಗದಿತ ಸ್ಥಳದಲ್ಲಿ ಅಹಾರ ಹಾಕದೆ, ಎಲ್ಲೆಂದರಲ್ಲಿ ಆಹಾರ ಎಸೆಯುತ್ತಿರುವ ಬಗ್ಗೆ ಮತ್ತು ಬೀದಿ ನಾಯಿಗಳ ಹಾವಳಿ ಬಗ್ಗೆ ದೂರು ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚು ದಾಖಲಾಗುತ್ತಿವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net